ಬೆಂಗಳೂರು: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಬಹುಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಿ ಪಾಲುದಾರರಾಗಲು ಸೌದಿ ಅರೇಬಿಯಾ ಆಸಕ್ತಿ ತೋರಿಸಿದೆ.
ಐಪಿಎಲ್‌ನಲ್ಲಿ ಹೂಡಿಕೆ ಮಾಡುವ ಕುರಿತು ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಸಲಹೆಗಾರರು ಭಾರತ ಸರ್ಕಾರದೊಂದಿಗೆ ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಈ ಕುರಿತು ಬ್ಲೂಮ್‌ಬರ್ಗ್ ನ್ಯೂಸ್ ವರದಿ ಮಾಡಿದೆ.
ಸಲ್ಮಾನ್ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಮಾತುಕತೆ ನಡೆದಿತ್ತು ಎನ್ನಲಾಗಿದೆ.
ಐಪಿಎಲ್ ಅಂದಾಜು ಮೌಲ್ಯವು ₹ 2.49 ಲಕ್ಷ ಇದೆ. ಅದರಲ್ಲಿ ₹ 42 ಸಾವಿರ ಕೋಟಿ ಹೂಡಿಕೆ ಮಾಡುವ ಕುರಿತು ಆಸಕ್ತಿ ತೋರಿದ್ದಾರೆ.
ಈ ಹೂಡಿಕೆಯೊಂದಿಗೆ ಬೇರೆ ದೇಶಗಳಿಗೂ ಟೂರ್ನಿಯನ್ನು ವಿಸ್ತರಿಸುವ ಉದ್ದೇಶವಿದೆ ಎಂದು ಹೇಳಲಾಗಿದೆ.
ಈ ಕುರಿತು ರಾಯಿಟರ್ಸ್ ಸುದ್ದಿ ಸಂಸ್ಥೆಯು ಪ್ರತಿಕ್ರಿಯೆಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯನ್ನು ಸಂಪರ್ಕಿಸಿದೆ. ಆದರೆ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.