ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಜಿಲೆಂಡ್ ವಿರುದ್ಧದ T20 ಸರಣಿಗೆ ಪಾಂಡ್ಯ ನಾಯಕ, ಏಕದಿನ ಸರಣಿಗೆ ಧವನ್ ನೇತೃತ್ವ

ಟಿ20 ಸರಣಿಯಿಂದ ದಿನೇಶ್‌ ಕಾರ್ತಿಕ್‌ ಔಟ್‌: ಏಕದಿನ ಸರಣಿಯಲ್ಲಿ ರೋಹಿತ್‌, ಕೊಹ್ಲಿಗೆ ವಿಶ್ರಾಂತಿ
Last Updated 31 ಅಕ್ಟೋಬರ್ 2022, 14:49 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿಯು ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಮುಂಬರುವ ಸರಣಿಗಳಿಗೆ ಭಾರತ ತಂಡವನ್ನು ಸೋಮವಾರ ಪ್ರಕಟಿಸಿದೆ.

ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್‌ ಪಾಂಡ್ಯ ನಾಯಕರಾಗಿದ್ದರೆ, ರಿಷಬ್‌ ಪಂತ್‌ ಉಪ ನಾಯಕರಾಗಿದ್ದಾರೆ. ಈ ತಂಡದಿಂದ ದಿನೇಶ್‌ ಕಾರ್ತಿಕ್ ಮತ್ತು ಆರ್‌ ಅಶ್ವಿನ್‌ ಅವರನ್ನು ಕೈಬಿಡಲಾಗಿದೆ. ಹಾಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಈ ಇಬ್ಬರೂ ಹಿರಿಯ ಆಟಗಾರರು ಸ್ಥಾನ ಹೊಂದಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಯನ್ನು ಶಿಖರ್‌ ದವನ್‌ ಮುನ್ನಡೆಸಲಿದ್ದು, ರಿಷಭ್‌ ಪಂತ್‌ ಉಪ ನಾಯಕರಾಗಿರಲಿದ್ದಾರೆ. ಸ್ಟಾರ್‌ ಆಟಗಾರರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಬಾಂಗ್ಲಾ ವಿರುದದ್ಧದ ಏಕದಿನ ಸರಣಿ ಮತ್ತು ಟೆಸ್ಟ್‌ ಸರಣಿಯನ್ನು ಎಂದಿನಂತೆ ರೋಹಿತ್‌ ಶರ್ಮಾ ಮುನ್ನಡೆಲಿಸಲಿದ್ದು, ಈ ತಂಡಕ್ಕೆ ವಿರಾಟ್‌ ಕೊಹ್ಲಿ ಸೇರ್ಪಡೆಯಾಗಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ಟಿ20 ತಂಡ: ಹಾರ್ದಿಕ್ ಪಾಂಡ್ಯ (ಕ್ಯಾಪ್ಟನ್‌), ರಿಷಬ್ ಪಂತ್ (ಉಪ ನಾಯಕ, ವಿಕೆಟ್‌ ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪ್‌), ವಾಷಿಂಗ್ಟನ್‌ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮದ್‌ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿ: ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪ ನಾಯಕ, ವಿಕೆಟ್‌ ಕೀಪರ್‌), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ವಾಷಿಂಗ್ಟನ್‌ ಸುಂದರ್, ಶಾರ್ದೂಲ್ ಠಾಕೂರ್, ಶಾಹಬಾಜ್ ಅಹ್ಮದ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ಬಾಂಗ್ಲಾದೇಶ ವಿರುದ್ಧದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ ಕೀಪರ್‌), ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್‌ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ ಕೀಪರ್‌), ಕೆಎಸ್ ಭರತ್ (ವಿಕೆಟ್‌ ಕೀಪರ್‌), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮದ್‌ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT