ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ವೇಗದ ಎಸೆತ: ಶಬ್ನಿಮ್ ಇಸ್ಮಾಯಿಲ್ ದಾಖಲೆ

Published 6 ಮಾರ್ಚ್ 2024, 12:58 IST
Last Updated 6 ಮಾರ್ಚ್ 2024, 12:58 IST
ಅಕ್ಷರ ಗಾತ್ರ

ನವದೆಹಲಿ: ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಬೌಲಿಂಗ್ ಮಾಡಿದ ದಾಖಲೆಗೆ ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಶಬ್ನಿಮ್ ಇಸ್ಮಾಯಿಲ್ ಭಾಜನರಾಗಿದ್ದಾರೆ.

ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಶಬ್ನಿಮ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗಂಟೆಗೆ 132.1 ಕಿ.ಮೀ ವೇಗದಲ್ಲಿ (82.08mph) ಬೌಲಿಂಗ್ ಮಾಡುವ ಮೂಲಕ ನೂತನ ದಾಖಲೆ ಬರೆದಿದ್ದಾರೆ.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶಬ್ನಿಮ್ ಈ ದಾಖಲೆ ಬರೆದಿದ್ದು, ಮಹಿಳಾ ಕ್ರಿಕೆಟ್‌ನಲ್ಲಿ ಗಂಟೆಗೆ 130ಕ್ಕೂ ಹೆಚ್ಚು ವೇಗದಲ್ಲಿ ಬೌಲಿಂಗ್ ಮಾಡಿದ ಮೊದಲ ಬೌಲರ್ ಎನಿಸಿದ್ದಾರೆ.

ಶಬ್ನಿಮ್ ಅವರು 2016ರಲ್ಲಿ ವೆಸ್ಟ್‌ ಇಂಡೀಸ್ ವಿರುದ್ಧ ಗಂಟೆಗೆ 128 ಕಿ.ಮೀ. ಮತ್ತು 2022ರ ಮಹಿಳಾ ವಿಶ್ವಕಪ್‌ನಲ್ಲಿ ಗಂಟೆಗೆ 127 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದರು.

ಐಸಿಸಿ ಮಹಿಳಾ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಎಂಟು ಬಾರಿ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿರುವ ಶಬ್ನಿಮ್, ಕಳೆದ ವರ್ಷವಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹಾಡಿದ್ದರು.

ದಾಖಲೆ ಕುರಿತು ಪ್ರತಿಕ್ರಿಯಿಸಿದ 35 ವರ್ಷದ ಶಬ್ನಿಮ್, 'ಬೌಲಿಂಗ್ ಮಾಡುವಾಗ ನಾನು ದೊಡ್ಡ ಸ್ಕ್ರೀನ್ ನೋಡುವುದಿಲ್ಲ' ಎಂದು ಹೇಳಿದ್ದಾರೆ.

ಈ ಪಂದ್ಯದಲ್ಲಿ ನಾಲ್ಕು ಓವರ್‌ಗಳಲ್ಲಿ 46 ರನ್ ಬಿಟ್ಟುಕೊಟ್ಟಿರುವ ಶಬ್ನಿಮ್ ಒಂದು ವಿಕೆಟ್ ಮಾತ್ರ ಪಡೆಯುವಲ್ಲಿ ಯಶಸ್ವಿಯಾದರು. ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 29 ರನ್ ಅಂತರದ ಸೋಲಿಗೆ ಶರಣಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT