ನವದೆಹಲಿ: ಆಲ್‌ರೌಂಡರ್ ಶಹಬಾಜ್ ಅಹ್ಮದ್ ಅವರು ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಇದೇ ಮೊದಲ ಬಾರಿ ಸ್ಥಾನ ಪಡೆದುಕೊಂಡಿದ್ದಾರೆ.

ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡದಲ್ಲಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡಿರುವುದರಿಂದ ಬದಲಿ ಆಟಗಾರನಾಗಿ ಅವರಿಗೆ ಅವಕಾಶ ಲಭಿಸಿದೆ.

27 ವರ್ಷದ ಶಹಬಾಜ್, ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಆಯ್ಕೆಗಾರರ ಗಮನ ಸೆಳೆದಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದ ಅವರು 219 ರನ್ ಪೇರಿಸಿದ್ದರಲ್ಲದೆ, ನಾಲ್ಕು ವಿಕೆಟ್ ಪಡೆದಿದ್ದರು.

18 ಪ್ರಥಮ ದರ್ಜೆ ಪಂದ್ಯಗಳಿಂದ ಅವರು 41.64 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ ಕೌಂಟಿ ಪಂದ್ಯದಲ್ಲಿ ಆಡುವ ವೇಳೆ ವಾಷಿಂಗ್ಟನ್ ಸುಂದರ್ ಭುಜದ ಗಾಯಕ್ಕೆ ಒಳಗಾಗಿದ್ದರು.

ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳ ಸರಣಿ ಹರಾರೆಯಲ್ಲಿ ಗುರುವಾರ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.