ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂಬಾಬ್ವೆ ವಿರುದ್ಧದ ಸರಣಿ: ಗಾಯಾಳು ವಾಷಿಂಗ್ಟನ್ ಸುಂದರ್ ಬದಲಿಗೆ ಶಾಬಾಜ್‌

Last Updated 16 ಆಗಸ್ಟ್ 2022, 9:50 IST
ಅಕ್ಷರ ಗಾತ್ರ

ಹರಾರೆ: ಆಲ್‌ರೌಂಡರ್ ಶಾಬಾಜ್ ಅಹ್ಮದ್ ಅವರು ಮೊದಲ ಬಾರಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಅವಕಾಶ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಾರ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಗಾಯಾಳು ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಶಾಬಾಜ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿದೆ.

ಐಪಿಎಲ್‌–2020ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ 27 ವರ್ಷದ ಶಾಬಾಜ್, ತಮ್ಮ ಆಲ್‌ರೌಂಡ್‌ ಆಟದ ಮೂಲಕ ಗಮನ ಸೆಳೆದಿದ್ದರು.

ಪಶ್ಚಿಮ ಬಂಗಾಳದ ಎಡಗೈ ಸ್ಪಿನ್ನರ್ ಶಾಬಾಜ್, 16 ಪಂದ್ಯಗಳಿಂದ 216 ರನ್ ಗಳಿಸಿದ್ದರು. ಅಲ್ಲದೆ, 4 ವಿಕೆಟ್ ಉರುಳಿಸಿದ್ದರು.

18 ಪ್ರಥಮ ದರ್ಜೆ ಪಂದ್ಯಗಳಲ್ಲಿ ಅವರ ಬ್ಯಾಟಿಂಗ್ ಸರಾಸರಿ ಶೇಕಡ 41.64ರಷ್ಟಿದ್ದು, ಬೌಲಿಂಗ್ ಸರಾಸರಿ ಶೇಕಡ 19.47ರಷ್ಟಿದೆ.

‘ಜಿಂಬಾಬ್ವೆ ವಿರುದ್ಧದ3 ಏಕದಿನ ಪಂದ್ಯಗಳ ಸರಣಿಗೆ ಆಯ್ಕೆ ಸಮಿತಿಯು ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಶಾಬಾಜ್ ಅಹ್ಮದ್ ಅವರನ್ನು ಆಯ್ಕೆ ಮಾಡಿದೆ’ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್ ಪಂದ್ಯದ ವೇಳೆ ಭುಜದ ಗಾಯಕ್ಕೆ ತುತ್ತಾಗಿರುವ ವಾಷಿಂಗ್ಟನ್ ಸುಂದರ್ ಅವರು ಜಿಂಬಾಬ್ವೆ ಸರಣಿಯಿಂದ ಹೊರಗುಳಿದಿದ್ದಾರೆ.

ಗುರುವಾರದಿಂದ ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT