ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾದ ಶಕೀಬ್ ಅಲ್ ಹಸನ್ ಟೆಸ್ಟ್‌, ಟಿ–20 ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

Published : 26 ಸೆಪ್ಟೆಂಬರ್ 2024, 10:30 IST
Last Updated : 26 ಸೆಪ್ಟೆಂಬರ್ 2024, 10:30 IST
ಫಾಲೋ ಮಾಡಿ
Comments

ನವದೆಹಲಿ: ಬಾಂಗ್ಲಾದೇಶ ಕ್ರಿಕೆಟ್‌ನ ಹಿರಿಯ ಆಲ್‌ರೌಂಡರ್‌ ಶಕೀಬ್ ಅಲ್ ಹಸನ್ ಅವರು ಟೆಸ್ಟ್ ಮತ್ತು ಟಿ20 ಕ್ರಿಕೆಟ್​ ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ.

ಶುಕ್ರವಾರ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಪಂದ್ಯ ನಡೆಯುವ ಮುನ್ನ ದಿನವಾದ ಇಂದು (ಗುರುವಾರ) ನಡೆದ ಪತ್ರಿಕಾಗೋಷ್ಠಿಯಲ್ಲಿ ಶಕೀಬ್ ಅಲ್ ಹಸನ್ ಅವರು ಈ ಘೋಷಣೆ ಮಾಡಿದರು.

ಅಕ್ಟೋಬರ್‌ ತಿಂಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಬಾಂಗ್ಲಾದೇಶದ ಮಿರ್ಜಾಪುರದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯ ತಮ್ಮ ಕೊನೆಯದು ಎಂದರು. ಈಗಾಗಲೇ 2024ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ನನ್ನ ಕೊನೆಯ ಟಿ20 ಪಂದ್ಯವನ್ನು ಆಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಮಾದರಿ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದರು.

ಏಕದಿನ ಮಾದರಿಯ ಕ್ರಿಕೆಟ್‌ನಲ್ಲಿ ಶಕೀಬ್‌ ಮುಂದುವರಿಯಲಿದ್ದು, 2025ರ ಚಾಂಪಿಯನ್‌ ಟ್ರೋಫಿ ಬಳಿಕ ಈ ಮಾದರಿಗೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.

ಟೆಸ್ಟ್‌ನಲ್ಲಿ ಶಕೀಬ್ ಸಾಧನೆ...

ಬಾಂಗ್ಲಾದೇಶ ಪರ ಶಕೀಬ್ ಅಲ್ ಹಸನ್ 70 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 128 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 4600 ರನ್ ಕಲೆಹಾಕಿದ್ದಾರೆ. ಈ ರನ್‌ಗಳಲ್ಲಿ 5 ಶತಕ, 1 ದ್ವಿಶತಕ ಹಾಗೂ 31 ಅರ್ಧಶತಕಗಳು ಸೇರಿವೆ. ಹಾಗೇ 119  ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 242 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಟಿ20ಯಲ್ಲಿ ಶಕೀಬ್ ಸಾಧನೆ...

129 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿರುವ ಅವರು 149 ವಿಕೆಟ್‌ಗಳನ್ನು ಪಡೆದುಕೊಂಡಿದ್ದು 2551 ರನ್‌ಗಳನ್ನು ಹೊಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT