ನವದೆಹಲಿ: ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಶೇನ್ ವಾಟ್ಸನ್ ‘ಬಿಗ್ ಫೈವ್’ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಭಾರತದ ವಿರಾಟ್ ಕೊಹ್ಲಿ ಅವರಿಗೆ ಸ್ಥಾನ ನೀಡಿದ್ದಾರೆ.
ವಾಟ್ಸನ್ ಪಟ್ಟಿಯಲ್ಲಿ ಕೊಹ್ಲಿ ಜೊತೆಗೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್, ಇಂಗ್ಲೆಂಡ್‌ನ ಜೋ ರೂಟ್ ಮತ್ತು ಪಾಕಿಸ್ತಾನದ ಬಾಬರ್ ಆಜಂ ಸ್ಥಾನ ಪಡೆದಿದ್ದಾರೆ.
‘ಟೆಸ್ಟ್ ಕ್ರಿಕೆಟ್‌ನಲ್ಲಿ ನನ್ನ ಮೊದಲ ಆಯ್ಕೆ ಯಾವಾಗಲೂ ವಿರಾಟ್ ಕೊಹ್ಲಿಯೇ. ಪ್ರತಿ ಸಲ ಬ್ಯಾಟಿಂಗ್‌ಗೆ ಬಂದಾಗಲೂ ಅವರ ಗಾಢವಾದ ಶ್ರದ್ಧೆ ಅನುಕರಣೀಯ. ಅವರೊಬ್ಬ ದಿವ್ಯಮಾನವ’ ಎಂದು ವಾಟ್ಸನ್ ಅವರು ಇಶಾ ಗುಹಾ ಅವರಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
‘ಈ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಆಜಂ ಅವರಿಗೆ ಎರಡನೇ ಸ್ಥಾನ ಕೊಡುತ್ತೇನೆ. ಅವರು ಟೆಸ್ಟ್ ಕ್ರಿಕೆಟ್‌ಗೆ ಹೊಂದಿಕೊಂಡು ಬೆಳೆಯುತ್ತಿರುವ ಪರಿ ಅಮೋಘವಾಗಿದೆ’ ಎಂದರು.
2019ರಿಂದ ಇಲ್ಲಿಯವರೆಗೆ ವಿರಾಟ್ ಯಾವುದೇ ಮಾದರಿಯಲ್ಲಿಯೂ ಶತಕ ಬಾರಿಸಿಲ್ಲ. ಮೂರು ಮಾದರಿಗಳ ತಂಡಗಳ ನಾಯಕತ್ವವನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.