ಸೋಮವಾರ, ಸೆಪ್ಟೆಂಬರ್ 27, 2021
22 °C

ಪತ್ನಿ ಆಯಿಷಾ ಮುಖರ್ಜಿಗೆ ವಿಚ್ಛೇದನ ನೀಡಿದ ಕ್ರಿಕೆಟರ್ ಶಿಖರ್ ಧವನ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಶಿಖರ್‌ ಧವನ್‌ ಅವರು ತಮ್ಮ ಪತ್ನಿ ಅಯಿಷಾ ಮುಖರ್ಜಿ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಈ ಬಗ್ಗೆ ಅಯಿಷಾ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ್ದಾರೆ. 

ಆಸ್ಟ್ರೇಲಿಯಾ ಮೂಲದ ಅಯಿಷಾ ಮುಖರ್ಜಿ ಅವರನ್ನು ಶಿಖರ್‌ ಧವನ್‌ 8 ವರ್ಷಗಳ ಹಿಂದೆ ಮದುವೆಯಾಗಿದ್ದರು.

ವಿವಾಹದ ನಂತರದ ದಿನಗಳಲ್ಲಿ ಈ ಜೋಡಿ ಜೊತೆ ಜೊತೆಯಲ್ಲೇ ಕಾಣಿಸಿಕೊಳ್ಳುತ್ತಿದ್ದರು. ಐಪಿಎಲ್‌ ಪಂದ್ಯಾವಳಿ ಸಂದರ್ಭದಲ್ಲಿ ಆಯಿಷಾ ಡಗ್ಔಟ್‌ನಲ್ಲೂ ಕಾಣಿಸಿಕೊಳ್ಳುತ್ತಿದ್ದರು. ಆದರೆ ಕಳೆದೆರಡು ವರ್ಷಗಳಿಂದ ಅವರು ಸಾರ್ವಜನಿಕವಾಗಿ ಜೊತೆಯಲ್ಲಿ ಕಾಣಿಸಿಕೊಂಡಿರಲಿಲ್ಲ.

ಈಗ ವಿಚ್ಛೇದನದ ವಿಚಾರವನ್ನು ಆಯಿಷಾ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ. 

ಆಯಿಷಾ ಅವರು ಶಿಖರ್‌ ಧವನ್‌ನನ್ನು ಎರಡನೇ ಮದುವೆಯಾಗಿದ್ದರು. ಇವರಿಗೆ ಒಂದು ಗಂಡು ಮಗು ಇದೆ. ಶಿಖರ್‌ ಧವನ್‌ ಅವರಿಗಿಂತ ಮೊದಲು ಆಯಿಷಾ ಆಸ್ಟ್ರೇಲಿಯಾ ಮೂಲದ ಉದ್ಯಮಿಯನ್ನು ಮದುವೆಯಾಗಿದ್ದರು. ಅವರಿಂದ ಆಯಿಷಾ ಇಬ್ಬರು ಹೆಣ್ಣು ಮಕ್ಕಳನ್ನು ಪಡೆದಿದ್ದಾರೆ. 

 ಇನ್ನು ಶಿಖರ್‌ ಧವನ್‌ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು