ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಬ್ಯಾಟರ್ ಶಿಖರ್ ಧವನ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ.
‘ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ. ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ಜೈ ಹಿಂದ್!’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
As I close this chapter of my cricketing journey, I carry with me countless memories and gratitude. Thank you for the love and support! Jai Hind! 🇮🇳 pic.twitter.com/QKxRH55Lgx
— Shikhar Dhawan (@SDhawan25) August 24, 2024
‘ಜೀವನದಲ್ಲಿ ಮುಂದುವರಿಯಲು ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನೆಮ್ಮದಿಯಿಂದ ನಿರ್ಗಮಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.
2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಧವನ್, ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
ಧವನ್ ಭಾರತದ ಪರ 34 ಟೆಸ್ಟ್, 167 ಒಡಿಐ ಹಾಗೂ 67 ಟಿ–20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ಏಕದಿನ ಮಾದರಿಯಲ್ಲಿ 44.11 ಸರಾಸರಿಯಲ್ಲಿ 6793 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 40.61ರ ಸರಾಸರಿಯಲ್ಲಿ 2315 ರನ್ ಗಳಿಸಿದ್ದಾರೆ.
2013ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಆರಂಭಿಕ ಜೋಡಿ ಉತ್ತಮ ಪ್ರದರ್ಶನ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.