ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KKR ವಿರುದ್ಧ ಉತ್ತಮ ಬ್ಯಾಟಿಂಗ್; ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶಿಖರ್ ಧವನ್

Last Updated 2 ಏಪ್ರಿಲ್ 2023, 9:33 IST
ಅಕ್ಷರ ಗಾತ್ರ

ಮೊಹಾಲಿ: ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶಿಖರ್‌ ಧವನ್‌ ಅವರು ರಾಯಲ್ ಚಾಲೆಂಜರ್ಸ್ ತಂಡದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರ ಹೆಸರಿನಲ್ಲಿರುವ ಅಪರೂಪದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಧವನ್‌, ಕೋಲ್ಕತ್ತ ನೈಟ್‌ ರೈಡರ್ಸ್‌ ವಿರುದ್ಧ ಶನಿವಾರ ನಡೆದ ಪಂದ್ಯವಲ್ಲಿ ಶ್ರೀಲಂಕಾ ಬ್ಯಾಟರ್‌ ಭಾನುಕ ರಾಜಪಕ್ಸ ಅವರೊಂದಿಗೆ ಅರ್ಧಶತಕದ ಜೊತೆಯಾಟವಾಡಿದರು. ಆ ಮೂಲಕ, ಐಪಿಎಲ್‌ನಲ್ಲಿ 94ನೇ ಬಾರಿಗೆ ಅರ್ಧಶತಕದ ಜೊತೆಯಾಟವಾಡಿದ ಬ್ಯಾಟರ್‌ ಎನಿಸಿಕೊಂಡರು. ವಿರಾಟ್‌ ಕೊಹ್ಲಿ ಸಹ ಇಷ್ಟೇ ಸಲ ಅರ್ಧಶತಕದ ಜೊತೆಯಾಟವಾಡಿದ್ದಾರೆ.

83 ಬಾರಿ ಅರ್ಧಶತಕ ಜೊತೆಯಾಟವಾಡಿರುವ ಸುರೇಶ್ ರೈನಾ, 82 ಬಾರಿ ಈ ಸಾಧನೆ ಮಾಡಿರುವ ಡೇವಿಡ್‌ ವಾರ್ನರ್‌ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಕಿಂಗ್ಸ್‌ಗೆ ಜಯ
ಪಂಜಾಬ್‌ ಕಿಂಗ್ಸ್‌ ತಂಡವು ಕೋಲ್ಕತ್ತ ವಿರುದ್ಧ ಶನಿವಾರ ನಡೆದ ಪಂದ್ಯವನ್ನು 7 ರನ್‌ ಅಂತರದಿಂದ ಗೆದ್ದುಕೊಂಡಿದೆ. ಇಲ್ಲಿನ ಪಂಜಾಬ್ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌, ಧವನ್‌ (40 ರನ್‌) ಹಾಗೂ ಭಾನುಕ ರಾಜಪಕ್ಸ (50 ರನ್‌) ಅವರ ಬ್ಯಾಟಿಂಗ್‌ ಬಲದಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 191 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ್ದ ಕೋಲ್ಕತ್ತ 16 ಓವರ್‌ಗಳಲ್ಲಿ 146ರನ್‌ ಗಳಿಸಿದ್ದಾಗ ಮಳೆ ಸುರಿಯಿತು. ಹೀಗಾಗಿ ಡಿಎಲ್‌ಎಸ್‌ ನಿಯಮದನ್ವಯ ಪಂಜಾಬ್‌ಗೆ ಜಯ ಘೋಷಿಸಲಾಯಿತು.

ಧವನ್‌ ಮತ್ತು ಭಾನುಕ ಜೋಡಿ 2ನೇ ವಿಕೆಟ್‌ ಪಾಲುದಾರಿಕೆಯಲ್ಲಿ 86 ರನ್ ಕಲೆಹಾಕಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT