ಸಿಡ್ನಿ: ಆಂತರಿಕ ರಕ್ತಸ್ರಾವದಿಂದಾಗ ಸಿಡ್ನಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಎಕ್ಸ್ ಪೋಸ್ಟ್ ಮೂಲಕ ಆರೋಗ್ಯದ ಮಾಹಿತಿ ನೀಡಿದ್ದಾರೆ.

ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಪ್ರಸ್ತುತ ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ, ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನನ್ನನ್ನು ನಿಮ್ಮ ಆಲೋಚನೆಗಳಲ್ಲಿ ಇರಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ಅದ್ಭುತವಾಗಿ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಆ ಸಂದರ್ಭದಲ್ಲಿ ಅಯ್ಯರ್ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.