ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಶುಭಮನ್ ಗಿಲ್ ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾದ ಬಲಗೈ ಆರಂಭಿಕ ಬ್ಯಾಟರ್ ಗಿಲ್, ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.

ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಂ ಅಗ್ರಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ಡರ್ ದುಸಾನ್ ಎರಡನೇ ಸ್ಥಾನದಲ್ಲಿದ್ದಾರೆ.

ಬಾಬರ್ 882, ದುಸ್ಸಾನ್ 777 ಮತ್ತು ಗಿಲ್ 750 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. 695 ರೇಟಿಂಗ್ ಪಾಯಿಂಟ್ ಹೊಂದಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ.

ಮತ್ತೊಂದೆಡೆ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, 12 ಸ್ಥಾನಗಳ ಬಡ್ತಿ ಪಡೆದು 24ನೇ ಸ್ಥಾನ (624 ರೇಟಿಂಗ್ ಪಾಯಿಂಗ್) ಪಡೆದಿದ್ದಾರೆ. ಇದು ಇಶಾನ್ ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ.

ಬೌಲಿಂಗ್ ವಿಭಾಗದಲ್ಲಿ ಭಾರತದ ಪರ ಮೊಹಮ್ಮದ್ ಸಿರಾಜ್ (8ನೇ ರ‍್ಯಾಂಕ್) ಅಗ್ರ 10ರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಭಾಗವನ್ನು ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ ಮುನ್ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.