ರಾಯಪುರ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಕುತ್ತಿಗೆ ನೋವಿನಿಂದಾಗಿ ತಂಡದಿಂದ ಹೊರಬಿದ್ದಿದ್ದ ಭಾರತ ಕ್ರಿಕೆಟ್ ತಂಡದ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಅವರು ಚೇತರಿಸಿಕೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ಬುಧವಾರ ತಿಳಿಸಿವೆ.

‘ಗಿಲ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಫಿಟ್ನೆಸ್ ಪರಿಶೀಲಿಸಿದ ನಂತರ ಅವರು ಉಪನಾಯಕನಾಗಿ ಮರಳಲಿದ್ದಾರೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ದಕ್ಷಿಣ ಆಫ್ರಿಕಾ ವಿರುದ್ಧ ನವೆಂಬರ್ 9ರಿಂದ ಆರಂಭವಾಗಲಿರುವ ಟಿ20 ಸರಣಿಗೆ ತಂಡವನ್ನು ಆಯ್ಕೆ ಮಾಡುವ ಕುರಿತು ಬುಧವಾರ ಕರೆದ ಸಭೆಯಲ್ಲಿ, ಸೂರ್ಯಕುಮಾರ್ ಯಾದವ್ ಟಿ20 ತಂಡದ ನಾಯಕತ್ವದಲ್ಲಿ ಮುಂದುವರೆದಿದ್ದು, ಶುಭಮನ್ ಗಿಲ್ ಉಪನಾಯಕನರನ್ನಾಗಿ ನೇಮಿಸಲಾಗುವುದು ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.
.ಕುತ್ತಿಗೆಗೆ ಗಾಯ: ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಶುಭಮನ್ ಗಿಲ್.IND vs SA: ಏಕದಿನ ಕ್ರಿಕೆಟ್ ಸರಣಿಗೆ ಗಿಲ್ ಅನುಮಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.