ಲಖನೌ: ಭಾರತ ಟಿ20 ಕ್ರಿಕೆಟ್ ತಂಡದ ಉಪನಾಯಕ ಶುಭಮನ್ ಗಿಲ್ ಅವರ ಕಾಲ್ಬೆರಳಿಗೆ ಗಾಯವಾಗಿದೆ. ಅದರಿಂದಾಗಿ ಅವರು ದಕ್ಷಿಣ ಆಫ್ರಿಕಾ ಎದುರಿನ ಒಂದು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

‘ಏಕನಾ ಕ್ರೀಡಾಂಗಣದಲ್ಲಿ ಬುಧವಾರ ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಗಿಲ್ ಅವರು ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರ ಕಾಲ್ಬೆರಳಿಗೆ ಚೆಂಡು ಬಡಿದು ಪೆಟ್ಟಾಯಿತು. ಇದರಿಂದಾಗಿ ಅವರು ವಿಪರೀತ ನೋವು ಅನುಭವಿಸಿದರು. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯಕೀಯ ತಂಡ ಹೇಳಿದೆ. ಆದ್ದರಿಂದ ಅವರು ಐದನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ’ ಎಂದು ತಂಡದ ಮೂಲಗಳು ತಿಳಿಸಿವೆ.

ಕಳೆದ ಮೂರು ಪಂದ್ಯಗಳಲ್ಲಿಯೂ ಅವರು ಬ್ಯಾಟಿಂಗ್ ಲಯ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದರು. ಆದ್ದರಿಂದ ಅವರ ಮೇಲೆ ಲಯಕ್ಕೆ ಮರಳುವ ಒತ್ತಡ ಹೆಚ್ಚಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.