ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಶುಭ್‌ಮನ್ ಗಿಲ್‌ಗೆ ₹12 ಲಕ್ಷ ದಂಡ!

Published 27 ಮಾರ್ಚ್ 2024, 9:36 IST
Last Updated 27 ಮಾರ್ಚ್ 2024, 9:36 IST
ಅಕ್ಷರ ಗಾತ್ರ

ಚೆನ್ನೈ: ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್‌(ಸಿಎಸ್‌ಕೆ) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಓವರ್ ಮಾಡಿದ್ದಕ್ಕಾಗಿ ಗುಜರಾತ್ ಟೈಟನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ.

‘ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಆವೃತ್ತಿಯ ಮೊದಲ ಅಪರಾಧವಾಗಿದ್ದು, ಸ್ಲೋ ಓವರ್ ರೇಟ್‌ ಅಪರಾಧಗಳಿಗೆ ಸಂಬಂಧಿಸಿದಂತೆ ಶುಭಮನ್‌ ಗಿಲ್‌ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಐಪಿಎಲ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮೊದಲ ಬಾರಿಗೆ ಐಪಿಎಲ್‌ನಲ್ಲಿ ಫ್ರಾಂಚೈಸಿಯೊಂದರ(ಗುಜರಾತ್ ಟೈಟನ್ಸ್‌) ನಾಯಕತ್ವ ವಹಿಸಿಕೊಂಡಿರುವ ಗಿಲ್‌, ಮುಂಬೈ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿಯೇ ಗೆದ್ದು ಬೀಗಿದ್ದರು. ಎರಡನೇ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗುಜರಾತ್‌ 63 ರನ್‌ಗಳ ಅಂತರದಿಂದ ಸೋಲನುಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT