ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICC T20 World Cup: ಆಸ್ಟ್ರೇಲಿಯಾ ತಂಡ ಪ್ರಕಟ; ಮಾರ್ಷ್ ನಾಯಕ, ಸ್ಮಿತ್ ಹೊರಕ್ಕೆ

Published 1 ಮೇ 2024, 9:47 IST
Last Updated 1 ಮೇ 2024, 9:47 IST
ಅಕ್ಷರ ಗಾತ್ರ

ಮೆಲ್ಬರ್ನ್: ಮುಂಬರುವ ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್‌ಗೆ 15 ಸದಸ್ಯ ಬಳಗದ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.

ಆಲ್‌ರೌಂಡರ್ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಲಿದ್ದು, ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರನ್ನು ಕೈಬಿಡಲಾಗಿದೆ.

2024ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ 22 ವರ್ಷದ ಯುವ ಆಟಗಾರ ಫ್ರೇಸರ್‌ ಮೆಕ್‌ಗುರ್ಕ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.

ಅನುಭವಿ ಆಟಗಾರರಾದ ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯಿನಿಸ್ ಹಾಗೂ ಮಿಚೆಲ್ ಸ್ಟಾರ್ಕ್ ತಂಡದಲ್ಲಿದ್ದಾರೆ.

ಇಂದು (ಮೇ 01) ತಂಡಗಳನ್ನು ಪ್ರಕಟಿಸಲು ಕೊನೆಯ ದಿನವಾಗಿತ್ತು. ಮೇ 25ರವರೆಗೆ ತಂಡಗಳಲ್ಲಿ ಬದಲಾವಣೆ ತರಬಹುದಾಗಿದೆ. ಆದರೆ ಇದಕ್ಕೆ ಐಸಿಸಿ ತಾಂತ್ರಿಕ ಸಮಿತಿಯ ಅನುಮೋದನೆ ಬೇಕಿದೆ.

ಆಸ್ಟ್ರೇಲಿಯಾ ತಂಡ ಇಂತಿದೆ:

ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮಿನ್ಸ್, ಟಿಮ್ ಡೇವಿಡ್, ನಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್ ಮತ್ತು ಆ್ಯಡಂ ಜಂಪಾ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT