ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಕ್ರಿಕೆಟ್‌ನಲ್ಲಿ ವೇಗದ 3 ಸಾವಿರ ರನ್: ಸ್ಮೃತಿ ಮಂದಾನ ದಾಖಲೆ

Last Updated 22 ಸೆಪ್ಟೆಂಬರ್ 2022, 10:41 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಬುಧವಾರ ಅಂತರರಾಷ್ಟ್ರೀಯ ಮಹಿಳಾ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ ವೇಗವಾಗಿ 3 ಸಾವಿರ ರನ್ ಗಳಿಸಿ ದಾಖಲೆ ಮಾಡಿದ್ದಾರೆ.

ಇದರೊಂದಿಗೆ ಏಕದಿನ ಮಾದರಿಯಲ್ಲಿ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೂರನೇ ಆಟಗಾರ್ತಿ ಎನಿಸಿಕೊಂಡರು. ಇದಕ್ಕೂ ಮುನ್ನ ಮಿಥಾಲಿ ರಾಜ್ ಮತ್ತು ಹರ್ಮನ್‌ಪ್ರೀತ್ ಕೌರ್ 3 ಸಾವಿರ ರನ್‌ ಗಳಿಸಿದ್ದರು.

76 ಏಕದಿನ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಮಂದಾನ, ಮಿಥಾಲಿ ರಾಜ್ ಅವರ ದಾಖಲೆಯನ್ನು ಮುರಿದರು. ಈ ಹಿಂದೆ ಮಿಥಾಲಿ ಅವರು 88 ಇನ್ನಿಂಗ್ಸ್‌ಗಳಲ್ಲಿ 3 ಸಾವಿರ ರನ್ ಪೂರೈಸಿದ್ದರು.

ಕ್ಯಾಂಟರ್ಬರಿನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮಂದಾನ ಈ ಸಾಧನೆ ಮಾಡಿದರು. ಸ್ಮೃತಿ ಮಂದಾನ ಏಕದಿನ ಮಾದರಿಯಲ್ಲಿ 43+ ಸರಾಸರಿ ಹಾಗೂ 85 ಸ್ಟ್ರೈಕ್ ರೇಟ್‌ನಲ್ಲಿ 3 ಸಾವಿರ ರನ್‌ ಪೂರ್ಣಗೊಳಿಸಿದರು.

ಪುರುಷರ ಏಕದಿನ ಮಾದರಿಯಲ್ಲಿ ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ವೇಗದ ರನ್ ಗಳಿಕೆ ಸಾಧನೆ ಮಾಡಿದ್ದಾರೆ. ಧವನ್ 72 ಇನ್ನಿಂಗ್ಸ್‌ಗಳಲ್ಲಿ 3000 ಏಕದಿನ ರನ್‌ಗಳನ್ನು ಗಳಿಸಿದರೆ, ಕೊಹ್ಲಿ 75 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

2013ರಲ್ಲಿ ಚೊಚ್ಚಲ ಏಕದಿನ ಪಂದ್ಯವನ್ನಾಡಿದ ಎಡಗೈ ಆರಂಭಿಕ ಆಟಗಾರ್ತಿ ಮಂದಾನ, ಇದುವರೆಗೆ 5 ಶತಕ ಮತ್ತು 24 ಅರ್ಧ ಶತಕ ಗಳಿಸಿದ್ದಾರೆ.

ಮಂದಾನ ಅವರು ಹೋವ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 99 ಎಸೆತಗಳಲ್ಲಿ 91 ರನ್‌ ಗಳಿಸಿ ತಂಡ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು.

ಇಂದು ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲೂ ಮಂದಾನ‌, 51 ಎಸೆತಗಳಲ್ಲಿ 40 ರನ್ ಗಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT