ಬುಧವಾರ, ಜುಲೈ 28, 2021
29 °C

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ರದ್ದು: ಸೌರವ್ ಗಂಗೂಲಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸೆಪ್ಟೆಂಬರ್‌ನಲ್ಲಿ ದುಬೈನಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯು ರದ್ದಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.

’ಏಷ್ಯಾ ಕಪ್ ರದ್ದಾಗಿದೆ. ಸೆಪ್ಟೆಂಬರ್‌ನಲ್ಲಿ ನಡೆಯಬೇಕಿತ್ತು‘ ಎಂದು  ಬುಧವಾರ  ನಡೆದ ಇನ್ಸ್ಟಾಗ್ರಾಮ್‌ ಲೈವ್‌ನಲ್ಲಿ ಅವರು ಹೇಳಿದ್ಧಾರೆ

ಆದರೆ, ಇದುವರೆಗೂ ಆತಿಥೇಯ ದೇಶದಿಂದ  ಅಥವಾ ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ)ನಿಂದ  ಟೂರ್ನಿಯು ರದ್ದಾದ ಕುರಿತು ಅಧಿಕೃತ ಹೇಳಿಕೆಯು ಹೊರಬಿದ್ದಿಲ್ಲ.

ಸೆಪ್ಟೆಂಬರ್ ತಿಂಗಳಲ್ಲಿ ಏಷ್ಯಾ ಕಪ್ ರದ್ದಾದರೆ ಬಿಸಿಸಿಐಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಸಲು ಹಾದಿ ಸುಗಮವಾಗಲಿದೆ ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು