ಶನಿವಾರ, ಮೇ 28, 2022
30 °C

ಕೋವಿಡ್‌ನಿಂದ ಬಳಲುತ್ತಿದ್ದ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಕೋವಿಡ್–19 ಸೋಂಕಿನಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ, ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಒಳಗಾಗಲಿದ್ದಾರೆ.

ಗಂಗೂಲಿ ಅವರ ಆರ್‌ಟಿ–ಪಿಸಿಆರ್ ವರದಿ ಸೋಮವಾರ ಪಾಸಿಟಿವ್ ಬಂದಿತ್ತು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಗೂಲಿ ಆರೋಗ್ಯ ಸ್ಥಿರವಾಗಿರುವುದಾಗಿ ಆಸ್ಪತ್ರೆಯ ವೈದ್ಯರು ಬುಧವಾರ ತಿಳಿಸಿದ್ದರು.

ಇದನ್ನೂ ಓದಿ: 

ಗಂಗೂಲಿ ಅವರು ಈ ವರ್ಷ ಮೂರನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದಾರೆ. ಜನವರಿಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮನೆಯಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದಾಗ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಾಣಿಸಿಕೊಂಡಿದ್ದರಿಂದ ಅವರಿಗೆ ಆ್ಯಂಜಿಯೊಪ್ಲಾಸ್ಟಿ ನಡೆಸಿ ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು. 20 ದಿನಗಳ ಬಳಿಕ ಮತ್ತೊಮ್ಮೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಜನವರಿ 28ರಂದು ಮತ್ತೊಮ್ಮೆ ಆ್ಯಂಜಿಯೊಪ್ಲಾಸ್ಟಿ ಮಾಡಿ ಇನ್ನೊಂದು ಸ್ಟಂಟ್ ಅಳವಡಿಸಲಾಗಿತ್ತು. ಸಂಪೂರ್ಣ ಗುಣಮುಖರಾದ ಬಳಿಕ ಮಾರ್ಚ್‌ನಲ್ಲಿ ಕರ್ತವ್ಯಕ್ಕೆ ಮರಳಿದ್ದರು. ಇವರು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು