ಗುರುವಾರ , ಏಪ್ರಿಲ್ 15, 2021
30 °C

ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ: ಇಂದು ಬಿಡುಗಡೆ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು (ಶನಿವಾರ) ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

‘ಗಂಗೂಲಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಶುಕ್ರವಾರ ರಾತ್ರಿ ಚೆನ್ನಾಗಿ ನಿದ್ರಿಸಿದ್ದಾರೆ. ಇಂದು ಬೆಳಿಗ್ಗೆ ಲಘು ಆಹಾರವನ್ನು ಸೇವಿಸಿದ್ದಾರೆ’ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, 48 ವರ್ಷದ ಗಂಗೂಲಿ ಅವರಿಗೆ ಗುರುವಾರ ಎರಡನೇ ಬಾರಿಗೆ ಆ್ಯಂಜಿಯೊಪ್ಲಾಸ್ಟಿ ನಡೆಸಲಾಗಿದ್ದು, ಮತ್ತೆರಡು ಸ್ಟೆಂಟ್‌ ಅಳವಡಿಸಲಾಗಿದೆ. ವೈದ್ಯಕೀಯ ಪರೀಕ್ಷಾ ವರದಿಗಳ ಫಲಿತ್ತಾಂಶ ಬಂದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಗಂಗೂಲಿಯವರಿಗೆ ಇತ್ತೀಚೆಗೆ ವ್ಯಾಯಾಮ ನಡೆಸುತ್ತಿದ್ದ ವೇಳೆ ಲಘು ಹೃದಯಾಘಾತ ಆಗಿತ್ತು. ಅವರ ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಂಡು ಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟೆಂಟ್‌ ಅಳವಡಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು