ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮೂರು ವರ್ಷಗಳ ನಂತರ ಮತ್ತೆ ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

52 ವರ್ಷದ ಗಂಗೂಲಿ ಅವರು 2015ರಿಂದ 2019ರವರೆಗೆ ಬಂಗಾಳ ಕ್ರಿಕೆಟ್ ಸಂಸ್ಥೆಯ ಚುಕ್ಕಾಣಿ ಹಿಡಿದಿದ್ದರು. ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಒಂದು ಅವಧಿ ಪೂರ್ಣಗೊಂಡ ಬಳಿಕ ರೋಜರ್ ಬಿನ್ನಿ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದರು.

‘ಗಂಗೂಲಿ ಅವರು ಮತ್ತೆ ಆಡಳಿತಕ್ಕೆ ಬರಲು ತುಂಬಾ ಉತ್ಸುಕರಾಗಿದ್ದಾರೆ. ಅವರು ಸಿಎಬಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ಅವರು ಸರ್ವಾನುಮತದ ಆಯ್ಕೆಯಾಗುತ್ತಾರೋ ಅಥವಾ ಚುನಾವಣೆ ನಡೆಯುತ್ತದೆಯೋ ಎಂಬುದು ಸ್ಪಷ್ಟವಾಗಿಲ್ಲ’ ಎಂದು ಸಿಎಬಿಯ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.