ಕೋಲ್ಕತ್ತ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರ ಪುತ್ರಿ ಸೇರಿದಂತೆ ಅವರ ಕುಟುಂಬದ ನಾಲ್ವರು ಸದಸ್ಯರಿಗೆ ಕೋವಿಡ್ ದೃಢಪಟ್ಟಿದೆ ಎಂದು ವರದಿಯಾಗಿದೆ.

ಸನಾ ಗಂಗೂಲಿ ಹಾಗೂ ಕುಟುಂಬದ ಇತರೆ ಸದಸ್ಯರಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಎಲ್ಲರೂ ಪ್ರತ್ಯೇಕವಾಸದಲ್ಲಿದ್ದಾರೆ.

ಇದನ್ನೂ ಓದಿ:ದೆಹಲಿಗೆ ಅಪ್ಪಳಿಸಿದ 3ನೇ ಅಲೆ, ಬುಧವಾರ 10 ಸಾವಿರ ಕೋವಿಡ್ ಪ್ರಕರಣಗಳ ನಿರೀಕ್ಷೆ

ಗಂಗೂಲಿ ಪತ್ನಿ ಡೋನಾ ಗಂಗೂಲಿ ಅವರಿಗೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿಯಾಗಿದೆ.

ಇತ್ತೀಚೆಗಷ್ಟೇ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಬಳಿಕ ವುಡ್ಲ್ಯಾಂಡ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸೆಂಬರ್ 31ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದರು. ಅವರು ಕೂಡ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.