ಬುಧವಾರ, ಸೆಪ್ಟೆಂಬರ್ 29, 2021
20 °C

ಸ್ನೇಹಶಿಷ್‌ ಗಂಗೂಲಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ : ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರ ಅಣ್ಣ, ಬಂಗಾಳ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಶಿಷ್ ಗಂಗೂಲಿ ಅವರು ಅನಾರೋಗ್ಯದ ಕಾರಣ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಸ್ನೇಹಶಿಷ್‌ ಅವರಲ್ಲಿ ಜಠರದ ಸೋಂಕು ಕಾಣಿಸಿಕೊಂಡಿದೆ. ಅವರ ಕೋವಿಡ್‌ ವರದಿ ನೆಗೆಟಿವ್ ಬಂದಿದೆ‘ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

53 ವರ್ಷದ ಸ್ನೇಹಶಿಷ್ ಈ ವರ್ಷದ ಆರಂಭದಲ್ಲಿ ಆ್ಯಂಜಿಯೊಪ್ಲಾಸ್ಟಿ ಮಾಡಿಸಿಕೊಂಡಿದ್ದರು. ಶುಕ್ರವಾರ ಅವರಲ್ಲಿ ವಾಂತಿ ಸಮಸ್ಯೆ ಕಾಣಿಸಿಕೊಂಡಿತು. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮುಂಜಾನೆ ಮೂರು ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಸ್ನೇಹಶಿಷ್ ಅವರ ಆಪ್ತ ಮೂಲಗಳು ಹೇಳಿವೆ.

ಸೌರವ್ ಅವರು ಸದ್ಯ ಪತ್ನಿ ಡೋನಾ ಜೊತೆ ಲಂಡನ್‌ನಲ್ಲಿದ್ದು ಅಣ್ಣನ ಆರೋಗ್ಯದ ಪರಿಸ್ಥಿತಿಯ ಬಗ್ಗೆ ಗಮನವಹಿಸಿದ್ದಾರೆ.

ಬಂಗಾಳದ ಮಾಜಿ ಬ್ಯಾಟ್ಸ್‌ಮನ್ ಆಗಿರುವ ಸ್ನೇಹಶಿಷ್‌, 59 ಪ್ರಥಮದರ್ಜೆ ಪಂದ್ಯಗಳನ್ನು ಆಡಿದ್ದು, 2534 ರನ್ ಗಳಿಸಿದ್ದಾರೆ. 18 ಲಿಸ್ಟ್ ಎ ಪಂದ್ಯಗಳಲ್ಲಿ 275 ರನ್‌ ಕಲೆಹಾಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು