ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟಿವಿ ಪಂದ್ಯ’ದೊಂದಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ಗೆ ಮರುಚಾಲನೆ 27ರಂದು

Last Updated 11 ಜೂನ್ 2020, 21:07 IST
ಅಕ್ಷರ ಗಾತ್ರ

ಜೊಹಾನ್ಸ್‌ಬರ್ಗ್‌: ಕೊರೊನಾ ವೈರಸ್‌ ಸೋಂಕು ತಡೆಗೆ ಲಾಕ್‌ಡೌನ್‌ ವಿಧಿಸಿದ್ದರಿಂದ ಸ್ಥಗಿತವಾಗಿದ್ದ ಕ್ರಿಕೆಟ್‌ ಚಟುವಟಿಕೆಗಳಿಗೆ ವಿನೂತನ ರೀತಿಯಲ್ಲಿ ಮರು ಆರಂಭ ನೀಡಲು ದಕ್ಷಿಣ ಆಫ್ರಿಕಾ ಸಜ್ಜಾಗಿದೆ.

ಇದೇ 27 ರಂದು ಸೆಂಚುರಿಯನ್‌ನಲ್ಲಿ ಟೆಲಿವಿಷನ್‌ಗಾಗಿ ಪಂದ್ಯಗಳನ್ನು ಏರ್ಪಡಿಸಿದೆ. ಒಟ್ಟು ಮೂರು ತಂಡಗಳು ಇದರಲ್ಲಿ ಭಾಗವಹಿಸಲಿವೆ. ಪ್ರೇಕ್ಷಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಟಿವಿಯ ಆದಾಯದಲ್ಲಿ ದೇಣಿಗೆಯನ್ನು ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರದ ಅನುಮತಿಗಾಗಿ ಕ್ರಿಕೆಟ್ ದಕ್ಷಿಣ ಆಫ್ರಿಕಾ ಕಾಯುತ್ತಿದೆ.

‘ಕ್ರೀಡಾ ಸಚಿವಾಲಯದ ಅನುಮತಿಯ ನಿರೀಕ್ಷೆಯಲ್ಲಿದ್ದೇವೆ. ದೇಶದಲ್ಲಿ ಸದ್ಯ ಮೂರನೇ ಹಂತದ ನಿಯಮಗಳಿವೆ. ಕ್ರೀಡೆ ಸಂಘಟನೆಯ ಕುರಿತು ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕಾಗುತ್ತದೆ. ಈ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಆಟಗಾರರು ಮಾತ್ರ ಆಡಲಿದ್ದಾರೆ’ ಎಂದು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜಾಕಸ್ ಫಾಲ್ ಹೇಳಿದ್ದಾರೆ.

‘ಪಂದ್ಯಗಳ ವೀಕ್ಷಣೆಗೆ ಕೇವಲ 200 ಜನಕ್ಕೆ ಅವಕಾಶ ನೀಡುವ ಕುರಿತು ಯೋಚಿಸಿದ್ದೇವೆ.ಪಂದ್ಯದಲ್ಲಿ ಲವಲವಿಕೆಯ ವಾತಾವರಣ ಕಾಪಾಡಿಕೊಳ್ಳಲು ಈ ರೀತಿ ಮಾಡುತ್ತಿದ್ದೇವೆ. ಎಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಪಂದ್ಯಗಳನ್ನು ಟಿವಿಯಲ್ಲಿ ನೇರಪ್ರಸಾರ ಮಾಡಲಾಗುವುದು; ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಮುಖ್ಯ ವೈದ್ಯಾಧಿಕಾರಿ ಡಾ. ಶುಯಬ್ ಮಾಂಜ್ರಾ ತಿಳಿಸಿದ್ದಾರೆ.

ಈ ಪಂದ್ಯಗಳಲ್ಲಿ ದೇಶದ ದಿಗ್ಗಜ ಆಟಗಾರರು ಕಣಕ್ಕಿಳಿಯುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT