ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs SA: ಭಾರತ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ

Published 21 ಡಿಸೆಂಬರ್ 2023, 11:06 IST
Last Updated 21 ಡಿಸೆಂಬರ್ 2023, 11:06 IST
ಅಕ್ಷರ ಗಾತ್ರ

ಕೇಪ್‌ಟೌನ್: ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳು ಗುರುವಾರ ಇಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಿವೆ.

ಭಾರತದ ವಿರುದ್ಧ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. 

ಮೂರು ಪಂದ್ಯಗಳ ಸರಣಿಯಲ್ಲಿ 1–1ರಿಂದ ಸಮಬಲ ಸಾಧಿಸಿರುವ ಉಭಯ ತಂಡಗಳು ಈಗ ಕೊನೆಯದ್ದರಲ್ಲಿ ಜಯಿಸಿ ಕಿರೀಟ ಧರಿಸುವ ಛಲದಲ್ಲಿವೆ.‌

ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಬೌಲರ್‌ಗಳ ಅಮೋಘ ಆಟದ ಬಲದಿಂದ ಸುಲಭ ಜಯ ಸಾಧಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್‌ನಿಂದಾಗಿ ಸೋತಿತು.

ಭಾರತದ ಪರ ರಜತ್ ಪಾಟೀದಾರ್ ಅವರು ಮೊದಲ ಏಕದಿನ ಪಂದ್ಯ ಆಡುತ್ತಿದ್ದಾರೆ. ತಂಡಕ್ಕೆ ವಾಷಿಂಗ್ಟನ್ ಸುಂದರ್‌ ಕೂಡ ಮರಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT