ಗುರುವಾರ , ಫೆಬ್ರವರಿ 27, 2020
19 °C

ಕ್ರಿಕೆಟ್‌: ದಕ್ಷಿಣ ಆಫ್ರಿಕಾ ತಂಡಕ್ಕೆ ಡಿ ಕಾಕ್‌ ಆಸರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೋರ್ಟ್‌ ಎಲಿಜಬೆತ್‌: ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ವಿಕೆಟ್‌ ಕೀಪರ್‌ ಕ್ವಿಂಟನ್‌ ಡಿ ಕಾಕ್‌ (ಬ್ಯಾಟಿಂಗ್‌ 63; 134ಎಸೆತ, 9ಬೌಂಡರಿ) ಅರ್ಧಶತಕ ಬಾರಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಆಸರೆಯಾದರು.

ಡಿ ಕಾಕ್‌ ಮತ್ತು ವರ್ನಾನ್‌ ಫಿಲಾಂಡರ್‌ (ಬ್ಯಾಟಿಂಗ್‌ 27; 55ಎಸೆತ, 5ಬೌಂಡರಿ) ಮುರಿಯದ ಏಳನೇ ವಿಕೆಟ್‌ ಪಾಲುದಾರಿಕೆಯಲ್ಲಿ ಗಳಿಸಿದ 54ರನ್‌ಗಳ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್‌ ಎದುರಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಫಾಲೋ ಆನ್‌ ಭೀತಿಯಿಂದ ಪಾರಾಗುವತ್ತ ಹೆಜ್ಜೆ ಇಟ್ಟಿದೆ.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌; ಮೊದಲ ಇನಿಂಗ್ಸ್‌: 152 ಓವರ್‌ಗಳಲ್ಲಿ 9 ವಿಕೆಟ್‌ಗೆ 499 ಡಿಕ್ಲೇರ್ಡ್‌.

ದಕ್ಷಿಣ ಆಫ್ರಿಕಾ: ಪ್ರಥಮ ಇನಿಂಗ್ಸ್‌: 82 ಓವರ್‌ಗಳಲ್ಲಿ 6 ವಿಕೆಟ್‌ಗೆ 208 (ಡೀನ್‌ ಎಲ್ಗರ್‌ 35, ವಾನ್‌ ಡರ್‌ ಡುಸೆನ್‌ 24, ಕ್ವಿಂಟನ್‌ ಡಿ ಕಾಕ್‌ ಬ್ಯಾಟಿಂಗ್‌ 63, ವರ್ನಾನ್‌ ಫಿಲಾಂಡರ್‌ ಬ್ಯಾಟಿಂಗ್‌ 27).

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು