ಗುರುವಾರ , ಆಗಸ್ಟ್ 11, 2022
21 °C

ಆಟಗಾರನಿಗೆ ಕೋವಿಡ್‌: ಇಂಗ್ಲೆಂಡ್‌–ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ

ಎಪಿ Updated:

ಅಕ್ಷರ ಗಾತ್ರ : | |

ಕೇಪ್‌ಟೌನ್‌: ಜೀವಸುರಕ್ಷಾ ವಾತಾವರಣದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡದ ಮತ್ತೊಬ್ಬ ಆಟಗಾರನಿಗೆ ಕೋವಿಡ್–19 ದೃಢಪಟ್ಟಿರುವುದರಿಂದ ಪ್ರವಾಸಿ ಇಂಗ್ಲೆಂಡ್ ತಂಡದ ಎದುರು ಶುಕ್ರವಾರ ನಡೆಯಬೇಕಿದ್ದ ಮೊದಲ ಏಕದಿನ ಪಂದ್ಯವನ್ನು ಭಾನುವಾರಕ್ಕೆ ಮುಂದೂಡಲಾಗಿದೆ.

‘ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಮುಂದೂಡಲಾಗಿದೆ. ಉಭಯ ತಂಡಗಳ ಆಟಗಾರರು ಹಾಗೂ ಸಿಬ್ಬಂದಿಯ ಆರೋಗ್ಯ ದೃಷ್ಟಿಯಿಂದ ಎರಡೂ ಮಂಡಳಿಗಳು ಚರ್ಚಿಸಿ ಈ ನಿರ್ಧಾರಕ್ಕೆ ಬಂದಿವೆ‘ ಎಂದು ಕ್ರಿಕೆಟ್‌ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಹಾಗೂ ಇಂಗ್ಲೆಂಡ್‌ ಮತ್ತು ವೇಲ್ಸ್ ಕ್ರಿಕೆಟ್‌ ಮಂಡಳಿ (ಇಸಿಬಿ) ಹೇಳಿವೆ.

ಕೊರೊನಾ ಸೋಂಕಿತ ಆಟಗಾರನ ಹೆಸರನ್ನು ಬಹಿರಂಗಪಡಿಸಿಲ್ಲ. ನವೆಂಬರ್ ತಿಂಗಳ ಮಧ್ಯದಲ್ಲಿ ಕೇಪ್‌ಟೌನ್ ಹೊಟೇಲ್‌ನ ಜೀವಸುರಕ್ಷಾ ವಾತಾವರಣ ಪ್ರವೇಶಿಸುವ ಮೊದಲೇ ಒಬ್ಬ ಆಟಗಾರನಲ್ಲಿ ಸೋಂಕು ಕಂಡುಬಂದಿತ್ತು. ಟ್ವೆಂಟಿ–20 ಸರಣಿ ಕೊನೆಗೊಳ್ಳುವ ಮೊದಲು ಮತ್ತೊಬ್ಬ ಆಟಗಾರನಲ್ಲಿ ಕೋವಿಡ್‌ ಪತ್ತೆಯಾಗಿತ್ತು.

ಪಾರ್ಲ್‌ ನಗರದ ಬೋಲ್ಯಾಂಡ್ ಪಾರ್ಕ್‌ ಕ್ರೀಡಾಂಗಣದಲ್ಲಿ ಉಭಯ ತಂಡಗಳು ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು