ಶುಕ್ರವಾರ, ಸೆಪ್ಟೆಂಬರ್ 18, 2020
24 °C

ತಾಹಿರ್‌ಗೆ ಭಾವನಾತ್ಮಕ ಕ್ಷಣ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಮ್ಯಾಂಚೆಸ್ಟರ್‌: ದಕ್ಷಿಣ ಆಫ್ರಿಕಾ ತಂಡದ ‘ಹಿರಿಯಣ್ಣ’ ಇಮ್ರಾನ್‌ ತಾಹಿರ್‌ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಭಾವನಾತ್ಮಕ ವಿದಾಯಕ್ಕೆ ಸಜ್ಜಾಗಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ತಂಡದ ಭವಿಷ್ಯದ ಬಗ್ಗೆ ಈ ಅನುಭವಿ ಲೆಗ್‌ಬ್ರೇಕ್‌ ಬೌಲರ್‌ ಆಶಾವಾದಿಯಾಗಿದ್ದಾರೆ.‌

ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ ವಿರುದ್ಧ ಶನಿವಾರ ನಡೆಯುವ ವಿಶ್ವಕಪ್‌ ಪಂದ್ಯ ತಾಹಿರ್‌ ಪಾಲಿಗೆ 107ನೇ ಮತ್ತು ಅಂತಿಮ ಏಕದಿನ ಪಂದ್ಯವಾಗಲಿದೆ. ನಂತರ 40 ವರ್ಷ ವಯಸ್ಸಿನ ಈ ಬೌಲರ್‌ 50 ಓವರುಗಳ ಮಾದರಿಯಿಂದ ನಿವೃತ್ತಿ ಪಡೆಯಲಿದ್ದಾರೆ.

ಪಾಕಿಸ್ತಾನದ ಲಾಹೋರ್‌ನಲ್ಲಿ ಜನಿಸಿದರೂ, ಅವರು ಮದುವೆ ಯಾಗಿದ್ದು ದಕ್ಷಿಣ ಆಫ್ರಿಕಾದ ಕನ್ಯೆಯನ್ನು. 2011ರ ಫೆಬ್ರುವರಿಯಲ್ಲಿ ನಡೆದ ವಿಶ್ವಕಪ್‌ ಸಂದರ್ಭದಲ್ಲಿ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು