ಬುಧವಾರ, ಜೂನ್ 29, 2022
26 °C

ಕ್ರಿಕೆಟ್‌: ಕರ್ನಾಟಕ ಶುಭಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕರ್ನಾಟಕ ತಂಡದವರು ಇಲ್ಲಿ ಶುಕ್ರವಾರ ಆರಂಭವಾದ ದಕ್ಷಿಣ ವಲಯ ಮಟ್ಟದ ಅಂಗವಿಕಲರ ಟ್ವೆಂಟಿ–20 ‌ಕ್ರಿಕೆಟ್‌ ಟೂರ್ನಿಯ ಆರಂಭದ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಸಂಪಾದಿಸಿದ್ದಾರೆ.

ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ಗೋವಾ ವಿರುದ್ಧ 137 ರನ್‌ಗಳ ಗೆಲುವು ಪಡೆಯಿತು. ಮೊದಲು ಬ್ಯಾಟ್ ಮಾಡಿದ ರಾಜ್ಯ ತಂಡ 20 ಓವರ್‌ಗಳಲ್ಲಿ 6ವಿಕೆಟ್‌ ಕಳೆದುಕೊಂಡು 204 ರನ್‌ ಗಳಿಸಿತು. ಎದುರಾಳಿ ಗೋವಾ 12.5 ಓವರ್‌ಗಳಲ್ಲಿ 67 ರನ್‌ ಗಳಿಸಿ ಆಲೌಟ್‌ ಆಯಿತು. ಇನ್ನೊಂದು ಪಂದ್ಯದಲ್ಲಿ ಆಂಧ್ರವನ್ನು ಮಣಿಸಿತು.

ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 184 ರನ್ ಗಳಿಸಿತು. ಆಂಧ್ರ 13.4 ಓವರ್‌ಗಳಲ್ಲಿ 71 ರನ್‌ಗೆ ಆಲೌಟ್‌ ಆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.