ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26 ಕ್ರೀಡಾಪಟುಗಳಿಗೆ ಅರ್ಜುನ ಪುರಸ್ಕಾರ: ಶಮಿ, ಶೀತಲ್ ದೇವಿಗೆ ಒಲಿದ ಗೌರವ

ಐವರಿಗೆ ದ್ರೋಣಾಚಾರ್ಯ
Published 20 ಡಿಸೆಂಬರ್ 2023, 23:30 IST
Last Updated 20 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ನವದೆಹಲಿ: ಚೀನಾದ ಹಾಂಗ್‌ಝೌನಲ್ಲಿ ನಡೆದ ಪ್ಯಾರಾ ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಆರ್ಚರಿಯಲ್ಲಿ ಚಿನ್ನ ಗೆದ್ದಿದ್ದ ಶೀತಲ್ ದೇವಿ ಮತ್ತು ಏಕದಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅಮೋಘ ಬೌಲಿಂಗ್ ಮಾಡಿದ್ದ ವೇಗಿ ಮೊಹಮ್ಮದ್ ಶಮಿ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಲಭಿಸಿದೆ.

ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿಯಾದ ಖೇಲ್‌ ರತ್ನ ಗೌರವಕ್ಕೆ ಬ್ಯಾಡ್ಮಿಂಟನ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ಭಾಜನರಾಗಿದ್ದಾರೆ.

ಕೇಂದ್ರ ಕ್ರೀಡಾ ಸಚಿವಾಲಯವು ಒಟ್ಟು 26 ಕ್ರೀಡಾ ಸಾಧಕರನ್ನು  ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಅದರಲ್ಲಿ ಏಷ್ಯನ್ ಮತ್ತು ಪ್ಯಾರಾ ಏಷ್ಯನ್ ಕ್ರೀಡಾಕೂಟದ ಸಾಧಕರದ್ದೇ ಸಿಂಹಪಾಲು.  

ಜಮ್ಮು–ಕಾಶ್ಮೀರದ ಶೀತಲ್ ದೇವಿ ಅವರಿಗೆ ಎರಡೂ ಕೈಗಳಿಲ್ಲ. ತಮ್ಮ ಕಾಲುಗಳಿಂದಲೇ ಬಿಲ್ಲುಗಾರಿಕೆ ಮಾಡಿ ಚಿನ್ನ ಗೆದ್ದಿದ್ದರು. 

ಮೊಹಮ್ಮದ್ ಶಮಿ ಈಚೆಗೆ ಮುಕ್ತಾಯವಾದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ 24 ವಿಕೆಟ್‌ಗಳನ್ನು ಗಳಿಸಿದ್ದರು. ಭಾರತ ತಂಡವು ಫೈನಲ್ ತಲುಪಲು ಪ್ರಮುಖ ಪಾತ್ರ ವಹಿಸಿದ್ದರು.

ಶೂಟರ್ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಕುಸ್ತಿಪಟು ಅಂತಿಮ ಪಂಘಾಲ್ ಮತ್ತು ಸುನಿಲ್ ಕುಮಾರ್, ಟೇಬಲ್ ಟೆನಿಸ್ ಆಟಗಾರ್ತಿ ಐಹಿಕಾ ಮುಖರ್ಜಿ ಅವರಿಗೂ ಅರ್ಜುನ ಪ್ರಶಸ್ತಿ ಲಭಿಸಿದೆ.

ತಮಿಳುನಾಡಿನ ಚೆಸ್‌ ಗ್ರ್ಯಾಂಡ್‌ಮಾಸ್ಟರ್‌  ಆರ್. ವೈಶಾಲಿ ಮತ್ತು  ಅವರ ಕೋಚ್ ಆರ್‌.ಬಿ. ರಮೇಶ್ ಅವರಿಗೆ ಕ್ರಮವಾಗಿ ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಲಭಿಸಿದೆ.

ಶೀತಲ್ ದೇವಿ
ಶೀತಲ್ ದೇವಿ
ಆರ್. ವೈಶಾಲಿ
ಆರ್. ವೈಶಾಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT