ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ವಿರುದ್ಧ ಸನ್‌ರೈಸರ್ಸ್‌ 277 ರನ್‌: 18 ಎಸೆತದಲ್ಲಿ ಅಭಿಷೇಕ್ ಅರ್ಧ ಶತಕ

Published 27 ಮಾರ್ಚ್ 2024, 16:09 IST
Last Updated 27 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ಹೈದರಾಬಾದ್: ಐಪಿಎಲ್‌ 17ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 277 ರನ್‌ ಗಳಿಸುವ ಮೂಲಕ ದಾಖಲೆ ನಿರ್ಮಿಸಿದೆ.

ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ ಕೇವಲ 16 ಎಸೆತಗಳನ್ನು ಎದುರಿಸಿ ಅರ್ಧ ಶತಕ ಗಳಿಸಿದ್ದಾರೆ. ಆ ಮೂಲಕ ಟ್ರಾವಿಸ್ ಹೆಡ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಟ್ರಾವಿಸ್ ಅವರು 18 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದ್ದೇ ಈವರೆಗಿನ ದಾಖಲೆಯಾಗಿತ್ತು. ಇದಕ್ಕೂ ಮೊದಲು 2015ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ನ ಡೇವಿಡ್ ವಾರ್ನರ್ ಅವರು 20 ಎಸೆತಗಳನ್ನು ಎದುರಿಸಿ ಅರ್ಧ ಶತಕ ಸಿಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT