ಹೈದರಾಬಾದ್: ಬುಧವಾರ ಇಲ್ಲಿ ಮುಕ್ತಾಯಗೊಂಡ 2026ರ ಐಪಿಎಲ್ನ 49 ನೇ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 33 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಈ ಪಂದ್ಯವನ್ನು ಸೋಲುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಆವೃತಿಯಲ್ಲಿ 3ನೇ ಸೋಲು ಕಂಡಿದೆ. ಪಂಜಾಬ್ ಕಿಂಗ್ಸ್ ತಂಡವು ಈ ಆವೃತಿಯಲ್ಲಿ ಒಟ್ಟು 10 ಪಂದ್ಯಗಳನ್ನಾಡಿದ್ದು, ಆ ಪೈಕಿ 6ರರಲ್ಲಿ ಗೆದ್ದು 3 ಪಂದ್ಯದಲ್ಲಿ ಸೋತಿದೆ. 1 ಪಂದ್ಯ ಮಳೆಯಿಂದ ರದ್ದಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು ಹೆನ್ರಿಚ್ ಕ್ಲಾಸೆನ್ ಮತ್ತು ಇಶಾನ್ ಕಿಶನ್ ಅವರ ಅರ್ಧಶತಕ ಹಾಗೂ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಉತ್ತಮ ಆರಂಭದೊಂದಿಗೆ ನಿಗದಿತ 20 ಓವರ್ಗಳಲ್ಲಿ 235 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪವರ್ ಪ್ಲೇನಲ್ಲಿಯೇ ಪ್ರಮುಖ ವಿಕೆಟ್ ಕಳೆದುಕೊಂಡು ಕೂಪರ್ ಕೊನೊಲಿ ಅವರ ಅಜೇಯ ಶತಕದಾಟದಿಂದ 202 ರನ್ ಗಳಿಸಲು ಮಾತ್ರ ಸಾಧ್ಯವಾಯಿತು.

ಈ ಪಂದ್ಯವನ್ನು ಗೆಲ್ಲುವ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡವು 11 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ 14 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ಪ್ಲೇ–ಆಫ್ಗೆ ಇನ್ನಷ್ಟು ಹತ್ತಿರವಾಗಿದೆ.

ಆರೆಂಜ್ ಕ್ಯಾಪ್

ಸನ್ ರೈಸರ್ಸ್ ಹೈದರಾಬಾದ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಈ ಪಂದ್ಯದ ನಂತರ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಪಂದ್ಯದಲ್ಲಿ 43 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ಸಹಿತ 69 ರನ್ ಬಾರಿಸಿದ ಅವರು ಆವೃತಿಯಲ್ಲಿ 494 ರನ್ಗಳನ್ನು ಕಲೆಹಾಕಿದ್ದಾರೆ. ಅಗ್ರ ಐವರ ಪಟ್ಟಿಯಲ್ಲಿ ಇದೇ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೂಡ ಇದ್ದು, ಈವರೆಗೆ 475 ರನ್ ಬಾರಿಸಿದ್ದಾರೆ.

ಗುರುವಾರ ಲಖನೌದಲ್ಲಿ ನಡೆಯಲಿರುವ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತರೆ, 2026ರ ಐಪಿಎಲ್ ಟೂರ್ನಿಯಿಂದ ಲಖನೌ ತಂಡ ಹೊರ ಬೀಳುವುದು ಖಚಿತವಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.