ಗುರುವಾರ , ಮೇ 13, 2021
16 °C

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ತಿಸಾರ ಪೆರೇರ ವಿದಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಆಲ್‌ರೌಂಡರ್ ತಿಸಾರ ಪೆರೇರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸೋಮವಾರ ನಿವೃತ್ತಿ ಪ್ರಕಟಿಸಿದ್ದಾರೆ.

‘ವಿದಾಯ ಹೇಳಲು ಇದು ಸಕಾಲ. ಯುವ ಆಟಗಾರರಿಗೆ ಅವಕಾಶ ಸಿಗಲಿ‘ ಎಂದು ಶ್ರೀಲಂಕಾ ಕ್ರಿಕೆಟ್‌ಗೆ (ಎಸ್‌ಎಲ್‌ಸಿ) ಬರೆದ ಪತ್ರದಲ್ಲಿ ಪೆರೇರ ಹೇಳಿದ್ದಾರೆ.

32 ವರ್ಷದ ಪೆರೇರ 166 ಏಕದಿನ, ಆರು ಟೆಸ್ಟ್ ಹಾಗೂ 84 ಟಿ20 ಪಂದ್ಯಗಳಲ್ಲಿ ಶ್ರೀಲಂಕಾ ತಂಡವನ್ನು ಪ್ರತಿನಿಧಿಸಿದ್ದಾರೆ. ಅವರು ಫ್ರಾಂಚೈಸ್ ಕ್ರಿಕೆಟ್‌ನಲ್ಲಿ ಮುಂದುವರಿಯುವ ಸಾಧ್ಯತೆಯಿದೆ.

‘ಶ್ರೀಲಂಕಾ ತಂಡವನ್ನು ಏಳು ವಿಶ್ವಕಪ್ ಟೂರ್ನಿಗಳಲ್ಲಿ ಪ್ರತಿನಿಧಿಸಿದ ಹೆಮ್ಮೆಯಿದೆ. ಬಾಂಗ್ಲಾದೇಶದಲ್ಲಿ ನಡೆದ 2014ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮಣಿಸಿ ಪ್ರಶಸ್ತಿ ಜಯಿಸಿದ್ದರಲ್ಲಿ ನನ್ನ ಕೊಡುಗೆ ಇದೆ‘ ಎಂದು ತಿಸಾರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ತಿಸಾರ ಅದ್ಭುತ ಆಲ್‌ರೌಂಡರ್‌. ಶ್ರೀಲಂಕಾ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ‘ ಎಂದು ಎಸ್‌ಎಲ್‌ಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆ್ಯಶ್ಲೆ ಡಿಸಿಲ್ವಾ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು