ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ತಂಡಕ್ಕೆ ಪಾಕಿಸ್ತಾನದ ವೇಗದ ಬೌಲರ್ ಅಕಿಬ್ ಜಾವೇದ್ ಬೌಲಿಂಗ್ ಕೋಚ್

Published 16 ಮಾರ್ಚ್ 2024, 16:18 IST
Last Updated 16 ಮಾರ್ಚ್ 2024, 16:18 IST
ಅಕ್ಷರ ಗಾತ್ರ

ಕೊಲಂಬೊ: ಪಾಕಿಸ್ತಾನದ ವೇಗದ ಬೌಲರ್ ಅಕೀಬ್ ಜಾವೇದ್ ಅವರನ್ನು ಶ್ರೀಲಂಕಾ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ. 

ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಲಂಕಾ ತಂಡಕ್ಕೆ ಅವರು ಮಾರ್ಗದರ್ಶನ ನೀಡಲಿದ್ದಾರೆ. 

1992ರ ವಿಶ್ವಕಪ್ ವಿಜೇತ ತಂಡದಲ್ಲಿದ್ದ ಜಾವೇದ್, ಪಾಕಿಸ್ತಾನ ಸೂಪರ್ ಲೀಗ್‌ ಟೂರ್ನಿಯ ಲಾಹೋರ್ ಖಲಂದರ್ಸ್‌ ತಂಡದ ಮುಖ್ಯ ಕೋಚ್ ಕೂಡ ಆಗಿದ್ದರು. 

51 ವರ್ಷದ ಜಾವೇದ್ ಕೋಚಿಂಗ್‌ನಲ್ಲಿಯೂ ಅನುಭವಿಯಾಗಿದ್ದಾರೆ. ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಯುಎಇ ತಂಡಗಳಿಗೆ ಮಾರ್ಗದರ್ಶನ ನೀಡಿದ್ದಾರೆ. 

ಅವರು ಕೋಚ್ ಆಗಿದ್ದ ಸಂದರ್ಭಲ್ಲಿ ಯುಎಇ ತಂಡವು  ಅಂತರರಾಷ್ಟ್ರೀಯ ಏಕದಿನ ಮತ್ತು ಟಿ20 ಮಾನ್ಯತೆಯನ್ನು ಗಳಿಸಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT