ಶುಕ್ರವಾರ, ಡಿಸೆಂಬರ್ 2, 2022
20 °C

ಅತ್ಯಾಚಾರ ಆರೋಪ: ಎಲ್ಲ ಪ್ರಕಾರದ ಕ್ರಿಕೆಟ್‌ಗಳಿಂದ ಧನುಷ್ಕ ಗುಣತಿಲಕ ಅಮಾನತು

ಪಿಟಿಐ Updated:

ಅಕ್ಷರ ಗಾತ್ರ : | |

ಕೊಲಂಬೊ: ಅತ್ಯಾಚಾರದ ಆರೋಪ ಕೇಳಿ ಬಂದಿರುವ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ಕ್ರಿಕೆಟ್‌ನಿಂದ ಅಮಾನತು ಮಾಡಲಾಗಿದೆ.

ಎಲ್ಲ ಪ್ರಕಾರದ ಕ್ರಿಕೆಟ್‌ಗಳಿಂದ ಗುಣತಿಲಕ ಅವರನ್ನು ಅಮಾನತು ಮಾಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ ಮೇಲೆ ಅತ್ಯಾಚಾರದ ದೂರು ನೀಡಿದ್ದರು.

ರೋಸ್‌ಬೇಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಗುಣತಿಲಕ ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದರು. ಬಳಿಕ ಈ ಘಟನೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

2015 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಗುಣತಿಲಕ, ಪ್ರಸ್ತುತ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು.

ಇನ್ನು ಟೂರ್ನಿಯಲ್ಲಿ ಇಂಗ್ಲೆಂಡ್ ಜೊತೆ ಕೊನೆ ಪಂದ್ಯವಾಡಿ ಸೋತು ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದೆ. ಅತ್ಯಾಚಾರ ಆರೋಪ ಬಂದಿರುವ ಗುಣತಿಲಕ ಅವರನ್ನು ಆಸ್ಟ್ರೇಲಿಯಾದಲ್ಲೇ ಬಿಟ್ಟು ಉಳಿದ ಆಟಗಾರರು ಶ್ರೀಲಂಕಾಕ್ಕೆ ತೆರಳಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು