ಗುರುವಾರ , ಆಗಸ್ಟ್ 5, 2021
28 °C

ಶ್ರೀಲಂಕಾ – ಭಾರತ ಕ್ರಿಕೆಟ್ ಸರಣಿಗೆ ಕೋವಿಡ್ ಕರಿ ನೆರಳು

ಪಿಟಿಐ Updated:

ಅಕ್ಷರ ಗಾತ್ರ : | |

ಕೊಲಂಬೊ: ಭಾರತದ ವಿರುದ್ಧ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಗೆ ಕೆಲವೇ ದಿನ ಬಾಕಿ ಇರುವಾಗ ಶ್ರೀಲಂಕಾ ಕ್ರಿಕೆಟ್‌ ತಂಡದ ಡೇಟಾ ಅನಾಲಿಸ್ಟ್‌ ಜಿ.ಟಿ. ನಿರೋಶನ್‌ಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ. ತಂಡದ ಬ್ಯಾಟಿಂಗ್‌ ಕೋಚ್ ಗ್ರ್ಯಾಂಟ್‌ ಫ್ಲವರ್ ಅವರಿಗೆ ಗುರುವಾರ ಕೋವಿಡ್ ದೃಢಪಟ್ಟಿತ್ತು.

‘ತಂಡದ ಆಟಗಾರರು, ಕೋಚ್‌ಗಳು, ಸಹಾಯಕ ಸಿಬ್ಬಂದಿಯನ್ನು ಗುರುವಾರ ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಗ್ರ್ಯಾಂಟ್‌ ಫ್ಲವರ್‌ಗೆ ಕೋವಿಡ್ ತಗುಲಿರುವುದು ಮೊದಲು ಪತ್ತೆಯಾಗಿತ್ತು. ಬಳಿಕ ಡೇಟಾ ಅನಾಲಿಸ್ಟ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಂಡಳಿ ತಿಳಿಸಿದೆ.

ಓದಿ: 

ತಂಡದ ಇತರ ಎಲ್ಲ ಆಟಗಾರರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಇಂಗ್ಲೆಂಡ್ ಪ್ರವಾಸದಿಂದ ಬಂದ 48 ಗಂಟೆ ಅವಧಿಯಲ್ಲಿ ತಂಡದ ಸದಸ್ಯರಲ್ಲಿ ಕೋವಿಡ್ ಪತ್ತೆಯಾಗಿದೆ. ಇಂಗ್ಲೆಂಡ್‌ನ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ತಂಡದ ಏಳು ಸದಸ್ಯರಲ್ಲಿ ಇತ್ತೀಚೆಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಶ್ರೀಲಂಕಾ ವಿರುದ್ಧದ ಕೊನೆಯ ಏಕ ದಿನ ಪಂದ್ಯದ ಬಳಿಕ ನಡೆಸಲಾದ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿತ್ತು.

ಶ್ರೀಲಂಕಾ – ಭಾರತ ನಡುವಣ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯು ಜುಲೈ 13ರಿಂದ ಆರಂಭವಾಗಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು