ಶನಿವಾರ, ಸೆಪ್ಟೆಂಬರ್ 18, 2021
24 °C

IND vs SL T20: ಭಾರತ ವಿರುದ್ಧ ಟಾಸ್‌ ಗೆದ್ದ ಶ್ರೀಲಂಕಾ, ಬೌಲಿಂಗ್‌ ಆಯ್ಕೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಕೊಲಂಬೊ: ಎರಡನೇ ಟಿ–20 ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಸದ್ಯ ಟಾಸ್‌ ಗೆದ್ದಿರುವ ಶ್ರೀಲಂಕಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ಈಗಾಗಲೇ ಏಕದಿನ ಕ್ರಿಕೆಟ್‌ ಸರಣಿಯನ್ನು ಗೆದ್ದಿರುವ ಭಾರತವು ಟಿ–20 ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿ ಕಣಕ್ಕಿಳಿದಿದೆ.

ಭಾರತದ ಆಲ್‌–ರೌಂಡರ್‌ ಕೃಣಾಲ್ ಪಾಂಡ್ಯ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಮಂಗಳವಾರ (ಜುಲೈ 27) ಶ್ರೀಲಂಕಾ ಎದುರು ನಡೆಯಬೇಕಿದ್ದ ಎರಡನೇ ಟಿ–20 ಪಂದ್ಯವನ್ನು ಮುಂದೂಡಲಾಗಿತ್ತು.

ತಂಡದ ಸದಸ್ಯರನ್ನು ಕ್ವಾರಂಟೈನ್‌ನಲ್ಲಿ ಇರಿಸಿ 8 ಮಂದಿ ಪ್ರಾಥಮಿಕ ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅವರ ಕೋವಿಡ್ ವರದಿಗಳು ನೆಗೆಟಿವ್ ಬಂದಿವೆ ಎಂದು ಬಿಸಿಸಿಐ ತಿಳಿಸಿತ್ತು.

ಮೊದಲ ಟಿ–20 ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ಎದುರು 38 ರನ್‌ಗಳ ಗೆಲುವು ಸಾಧಿಸಿತು.

ತಂಡಗಳು: ಭಾರತ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕವಾಡ್, ದೇವದತ್ತ ಪಡಿಕ್ಕಲ್, ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ರಾಹುಲ್ ಚಾಹರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ವರುಣ್ ಚಕ್ರವರ್ತಿ

ಶ್ರೀಲಂಕಾ: ದಸುನ್ ಶನಾಕ (ನಾಯಕ), ಅವಿಷ್ಕಾ ಫರ್ನಾಂಡೊ, ಧನಂಜಯ ಡಿಸಿಲ್ವಾ, ಮಿನೊದ್ ಭಾನುಕಾ (ವಿಕೆಟ್‌ಕೀಪರ್), ರಮೇಶ್ ಮೆಂಡಿಸ್, ವಾಣಿಂದು ಹಸರಂಗ, ಚಮಿಕಾ ಕರುಣಾರತ್ನೆ, ಇಸುರು ಉಡಾನ, ಅಖಿಲ ಧನಂಜಯ್, ದುಷ್ಮಂತ ಚಾಮಿರಾ

ಇದನ್ನೂ ಓದಿ... ಐಸಿಸಿ ಟ್ವೆಂಟಿ–20 ರ‍್ಯಾಂಕಿಂಗ್‌: ಐದನೇ ಸ್ಥಾನದಲ್ಲಿ ಕೊಹ್ಲಿ ಸ್ಥಿರ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು