ಬುಧವಾರ, ಡಿಸೆಂಬರ್ 8, 2021
18 °C

T20 WC: ಐರ್ಲೆಂಡ್ ವಿರುದ್ಧ ಗೆಲುವು, ಸೂಪರ್-12 ಹಂತಕ್ಕೆ ಲಂಕಾ ಲಗ್ಗೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ 'ಎ' ಗುಂಪಿನಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾ 70 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. 

ಈ ಮೂಲಕ ಸತತ ಎರಡನೇ ಗೆಲುವು ದಾಖಲಿಸಿದ್ದು, ಸೂಪರ್-12 ಹಂತಕ್ಕೆ ಪ್ರವೇಶಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ವನಿಂದು ಹಸರಂಗ(71) ಹಾಗೂ ಪಾತುಮ್ ನಿಸಂಕಾ (61)ಬಿರುಸಿನ ಅರ್ಧಶತಕಗಳ ನೆರವಿನಿಂದ ಏಳು ವಿಕೆಟ್ ನಷ್ಟಕ್ಕೆ 171 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. 

ಲಂಕಾ ಎಂಟು ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಜೊತೆಗೂಡಿದ ನಿಸಂಕಾ ಹಾಗೂ ವನಿಂದು ನಾಲ್ಕನೇ ವಿಕೆಟ್‌ಗೆ 123 ರನ್‌ಗಳ ಜೊತೆಯಾಟ ಕಟ್ಟಿದರು. 

47 ಎಸೆತಗಳನ್ನು ಎದುರಿಸಿದ ಹಸರಂಗ 10 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 71 ರನ್ ಗಳಿಸಿದರು. ಅತ್ತ ನಿಸಂಕಾ 47 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು. 

ಐರ್ಲೆಂಡ್ ಪರ ಜೋಶುವಾ ಲಿಟ್ಲ್ 23 ರನ್ ತೆತ್ತು ನಾಲ್ಕು ವಿಕೆಟ್ ಕಬಳಿಸಿದರು. 

ಬಳಿಕ ಗುರಿ ಬೆನ್ನತ್ತಿದ ಐರ್ಲೆಂಡ್ 18.3 ಓವರ್‌ಗಳಲ್ಲಿ ಕೇವಲ 101 ರನ್‌ಗಳಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕ ಆಂಡ್ರ್ಯೂ ಬಾಲ್ಬಿರ್ನಿ (41)  ಹಾಗೂ ಕರ್ಟಿಸ್ ಕ್ಯಾಂಫರ್ (24) ಹೊರತುಪಡಿಸಿ ಇತರೆ ಯಾವ ಬ್ಯಾಟರ್‌ಗಳು ಮಿಂಚಲಿಲ್ಲ. 

ಲಂಕಾ ಪರ ಮಹೀಶ್‌ ತೀಕ್ಷನ ಮೂರು ವಿಕೆಟ್ ಪಡೆದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು