ಗುರುವಾರ , ಜೂಲೈ 2, 2020
28 °C

ಲಾಕ್‌ಡೌನ್ ತೆರವು | ಇಂದಿನಿಂದ ಶ್ರೀಲಂಕಾ ಕ್ರಿಕೆಟಿಗರ ಅಭ್ಯಾಸ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಲೊಂಬೊ: ಲಾಕ್‌ಡೌನ್‌ನಿಂದಾಗಿ ಸುಮಾರು ಎರಡೂವರೆ ತಿಂಗಳು ಮೈದಾನದಿಂದ ದೂರ ಉಳಿದಿದ್ದ ಶ್ರೀಲಂಕಾ ಕ್ರಿಕೆಟ್‌ ತಂಡದ ಆಟಗಾರರು ಸೋಮವಾರದಿಂದ ಅಭ್ಯಾಸ ಆರಂಭಿಸಲಿದ್ದಾರೆ.

‘ಆಯ್ದ 13 ಮಂದಿ ಕ್ರಿಕೆಟಿಗರು 12 ದಿನಗಳ ಕಾಲ ಕೊಲೊಂಬೊ ಕ್ರಿಕೆಟ್‌ ಕ್ಲಬ್‌ನಲ್ಲಿ ನಡೆಯುವ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಶ್ರೀಲಂಕಾ ಕ್ರಿಕೆಟ್‌ (ಎಸ್‌ಎಲ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

‘ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಹೊಂದಿಕೊಳ್ಳಲು ಬೌಲರ್‌ಗಳಿಗೆ ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಶಿಬಿರದಲ್ಲಿ ಬೌಲರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ನಾಲ್ಕು ಮಂದಿಯ ತಂಡವು ಇವರಿಗೆ ಅಗತ್ಯ ಮಾರ್ಗದರ್ಶನ ನೀಡಲಿದೆ. ಇದರಲ್ಲಿ ಕೋಚ್‌ ಕೂಡ ಇರಲಿದ್ದಾರೆ’ ಎಂದು ವಿವರಿಸಿದೆ.

‘ಕ್ರೀಡಾ ಹಾಗೂ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಶಿಬಿರದ ವೇಳೆ ಆಟಗಾರರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ’ ಎಂದೂ ಹೇಳಿದೆ.

ಶ್ರೀಲಂಕಾದಲ್ಲಿ ಮಾರ್ಚ್‌ನಲ್ಲಿ ಕ್ರಿಕೆಟ್‌ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಕೋವಿಡ್‌ ಭೀತಿಯಿಂದಾಗಿ ತವರಿನಲ್ಲಿ ನಿಗದಿಯಾಗಿದ್ದ ಇಂಗ್ಲೆಂಡ್‌ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳನ್ನೂ ಎಸ್‌ಎಲ್‌ಸಿ ಮುಂದೂಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು