ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ತೆರವು | ಅಭ್ಯಾಸ ಆರಂಭಿಸಿದ ಕ್ರಿಕೆಟಿಗರು

Last Updated 1 ಜೂನ್ 2020, 19:30 IST
ಅಕ್ಷರ ಗಾತ್ರ

ಸಿಡ್ನಿ/ಕೊಲೊಂಬೊ: ಲಾಕ್‌ಡೌನ್‌ನಿಂದಾಗಿ ಸುಮಾರು ಎರಡೂವರೆ ತಿಂಗಳು ಮೈದಾನದಿಂದ ದೂರ ಉಳಿದಿದ್ದ ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ಕ್ರಿಕೆಟ್‌ ತಂಡಗಳ ಆಟಗಾರರು ಸೋಮವಾರ ನೆಟ್ಸ್‌ನಲ್ಲಿ ತಾಲೀಮು ನಡೆಸಿದರು.

ಕಾಂಗರೂ ನಾಡಿನ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ಗಳಾದ ಸ್ಟೀವ್‌ ಸ್ಮಿತ್‌, ಡೇವಿಡ್‌ ವಾರ್ನರ್‌ ಹಾಗೂ ಎಡಗೈ ವೇಗದ ಬೌಲರ್‌ ಮಿಷೆಲ್‌ ಸ್ಟಾರ್ಕ್‌ ಅವರು ಸಹ ಆಟಗಾರರ ಜೊತೆ ಸಿಡ್ನಿ ಒಲಿಂಪಿಕ್ ಪಾರ್ಕ್‌ನಲ್ಲಿ ಅಭ್ಯಾಸ ಮಾಡಿದರು.

ಶ್ರೀಲಂಕಾ ತಂಡದ ಆಯ್ದ 13 ಮಂದಿ ಆಟಗಾರರು ಕೊಲೊಂಬೊ ಕ್ರಿಕೆಟ್‌ ಕ್ಲಬ್‌ನಲ್ಲಿ ಆಯೋಜಿಸಿರುವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡರು. ಇವರು 12 ದಿನಗಳ ಕಾಲ ಶಿಬಿರದಲ್ಲಿ ಇರಲಿದ್ದಾರೆ.

‘ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಹೊಂದಿಕೊಳ್ಳಲು ಬೌಲರ್‌ಗಳಿಗೆ ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ. ಈ ಕಾರಣದಿಂದಲೇ ಶಿಬಿರದಲ್ಲಿ ಬೌಲರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ’ ಎಂದು ಶ್ರೀಲಂಕಾ ಕ್ರಿಕೆಟ್‌ (ಎಸ್‌ಎಲ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT