ತೆಲಂಗಾಣ: ಹೈದರಾಬಾದ್ನಲ್ಲಿ ಸೆ.25ರಂದು (ಭಾನುವಾರ) ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಟಿಕೆಟ್ ಖರೀದಿಸಲು ಕ್ರಿಕೆಟ್ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಮೈದಾನದ ಹೊರಗಡೆಕಾಲ್ತುಳಿತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ –ಆಸ್ಟ್ರೇಲಿಯಾ ನಡುವೆ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ.

ವಾರಾಂತ್ಯದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನರು ಟಿಕೆಟ್ ಖರೀದಿಸಲು ಕ್ರೀಡಾಂಗಣದತ್ತ ಮುಖ ಮಾಡುತ್ತಿದ್ದಾರೆ. ಟಿಕೆಟ್ ಖರೀದಿಗಾಗಿ ಅಭಿಮಾನಿಗಳು ಸರತಿ ಸಾಲಿನಲ್ಲಿ ಕಾದು ನಿಂತಿರುವ ದೃಶ್ಯಗಳು ಬುಧವಾರ ಕಂಡು ಬಂದಿತ್ತು.

ಸದ್ಯ ಕ್ರೀಡಾಂಗಣದಲ್ಲಿ ನೆರೆದಿದ್ದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ 1-0ರಲ್ಲಿ ಮುನ್ನಡೆ ಸಾಧಿಸಿದೆ.

ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ 208 ರನ್ಗಳ ಬೃಹತ್ ಮೊತ್ತ ಪೇರಿಸಿಯೂ ಸೋಲಿಗೆ ಶರಣಾಯಿತು. ಆಸ್ಟ್ರೇಲಿಯಾ 19.2 ಓವರ್ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಎರಡನೇ ಟಿ20 ಪಂದ್ಯ ಸೆ.23ರಂದು ಶುಕ್ರವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಓದಿ...ಮುಂದಿನ ವರ್ಷದಿಂದ ಹಳೆಯ ಸ್ವರೂಪಕ್ಕೆ ಮರಳಲಿರುವ ಐಪಿಎಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.