ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾದಲ್ಲೇ ಉಳಿದ ಕಮಿನ್ಸ್; ಭಾರತ ವಿರುದ್ಧದ 4ನೇ ಟೆಸ್ಟ್‌ಗೂ ಸ್ಮಿತ್ ನಾಯಕ

Last Updated 6 ಮಾರ್ಚ್ 2023, 11:09 IST
ಅಕ್ಷರ ಗಾತ್ರ

ಅಹಮದಾಬಾದ್‌: ಆತಿಥೇಯ ಭಾರತದ ವಿರುದ್ಧ ನಡೆಯುತ್ತಿರುವ ಬಾರ್ಡರ್‌–ಗಾವಸ್ಕರ್‌ ಟೆಸ್ಟ್‌ ಕ್ರಿಕೆಟ್‌ ಸರಣಿಯ ನಾಲ್ಕನೇ ಪಂದ್ಯಕ್ಕೂ ಸ್ಟೀವ್‌ ಸ್ಮಿತ್‌ ಅವರೇ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ನಾಯಕ ಪ್ಯಾಟ್‌ ಕಮಿನ್ಸ್‌ ಅವರು ತಮ್ಮ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾಗೆ ವಾಪಸ್‌ ಆಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸರಣಿಯ ಮೊದಲೆರಡು ಪಂದ್ಯಗಳಿಗೆ ತಂಡ ಮುನ್ನಡೆಸಿದ್ದ ಕಮಿನ್ಸ್‌, ಬಳಿಕ ತವರಿಗೆ ಮರಳಿದ್ದರು. ಆ ಎರಡೂ ಪಂದ್ಯಗಳನ್ನು ಭಾರತ ಗೆದ್ದುಕೊಂಡಿತ್ತು. ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ತಂಡದ ಹೊಣೆಯನ್ನು ಸ್ಮಿತ್‌ ವಹಿಸಲಾಗಿತ್ತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್‌ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು.

ಇದು ಕಳೆದ ಆರು ವರ್ಷಗಳಲ್ಲಿ ಭಾರತದ ನೆಲದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸಿಕ್ಕ ಮೊದಲ ಗೆಲುವೂ ಹೌದು. ಈ ಜಯದೊಂದಿಗೆ ಆಸ್ಟ್ರೇಲಿಯಾ ತಂಡವು ಜೂನ್‌ ತಿಂಗಳಲ್ಲಿ ಲಂಡನ್‌ನಲ್ಲಿ ನಡೆಯುವ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೆ ಅರ್ಹತೆ ಗಿಟ್ಟಿಸಿದೆ.

ಕಮಿನ್ಸ್‌ ಸಿಡ್ನಿಯಲ್ಲಿಯೇ ಉಳಿಯಲಿದ್ದಾರೆ ಎಂದು Cricket.com.au ವೆಬ್‌ಸೈಟ್‌ ವರದಿ ಮಾಡಿದೆ. ಅಹಮದಾಬಾದ್‌ನಲ್ಲಿ ನಡೆಯುವ ಅಂತಿಮ ಟೆಸ್ಟ್‌ ಬಳಿಕ ಉಭಯ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಅದರಲ್ಲಿ ಕಮಿನ್ಸ್‌ ಆಡಲಿದ್ದಾರೆಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.

ಗಾಯಗೊಂಡು ತವರಿಗೆ ತೆರಳಿರುವ ಮತ್ತೊಬ್ಬ ಆಟಗಾರ ಜೇ ರಿಚರ್ಡ್‌ಸನ್‌ ಬದಲು ನಥಾನ್‌ ಎಲ್ಲಿಸ್‌ ಅವರು ಮಾರ್ಚ್‌ 17ರಿಂದ ಆರಂಭವಾಗುವ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಕೂಡಿಕೊಳ್ಳಲಿದ್ದಾರೆ ಎಂದೂ ವೆಬ್‌ಸೈಟ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT