ಬುಧವಾರ, ಡಿಸೆಂಬರ್ 8, 2021
28 °C

ಐಪಿಎಲ್‌ ಆರಂಭಿಕ ಪಂದ್ಯಗಳಿಗೆ ಸ್ಟೋಕ್ಸ್ ಇಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಂಗ್ಲೆಂಡ್‌ನ ಆಲ್‌ರೌಂಡರ್, ಸ್ಫೋಟಕ ಬ್ಯಾಟ್ಸ್‌ಮನ್ ಬೆನ್ ಸ್ಟೋಕ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ 13ನೇ ಆವೃತ್ತಿಯ ಮೊದಲ ಕೆಲವು ಪಂದ್ಯಗಳಿಗೆ ಲಭ್ಯ ಇರುವುದಿಲ್ಲ.

ರಾಜಸ್ತಾನ್ ರಾಯಲ್ಸ್ ತಂಡದ ಸದಸ್ಯ ಆಗಿರುವ ಸ್ಟೋಕ್ಸ್ ಅವರ ತಂದೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರನ್ನು ನೋಡಲು ಕಳೆದ ತಿಂಗಳಲ್ಲಿ ಸ್ಟೋಕ್ಸ್‌ ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್‌ಗೆ  ತೆರಳಿದ್ದಾರೆ. ಅವರ 14 ದಿನಗಳ ಕ್ವಾರಂಟೈನ್ ಸೋಮವಾರ ಮುಕ್ತಾಯಗೊಂಡಿದ್ದು ಕೆಲವು ದಿನ ತಂದೆಯ ಜೊತೆ ಇರಲು ನಿರ್ಧರಿಸಿದ್ದಾರೆ.

ಎಷ್ಟು ದಿನ ನ್ಯೂಜಿಲೆಂಡ್‌ನಲ್ಲಿ ಇರುತ್ತಾರೆ ಎಂಬುದು ಇನ್ನೂ ನಿರ್ಧಾರವಾಗಲಿಲ್ಲ. ಫ್ರಾಂಚೈಸ್‌ಗೆ ಅವರು ಈ ಕುರಿತು ಯಾವುದೇ ಮಾಹಿತಿ ನೀಡಲಿಲ್ಲ ಎಂದು ತಿಳಿದುಬಂದಿದ್ದು ಆರಂಭದ ಕೆಲವು ಪಂದ್ಯಗಳಿಗೆ ಲಭ್ಯ ಇರುವುದಿಲ್ಲ ಎಂಬುದು ಖಚಿತ ಎಂದು ಮೂಲಗಳು ತಿಳಿಸಿವೆ.

ಯುಎಇಯಲ್ಲಿ ಇದೇ ತಿಂಗಳ 19ರಿಂದ ಐಪಿಎಲ್ ಟೂರ್ನಿ ನಡೆಯಲಿದೆ. 29 ವರ್ಷದ ಸ್ಟೋಕ್ಸ್ ಕಳೆದ ವರ್ಷ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್‌ಗೆ ಪ್ರಶಸ್ತಿ ಗಳಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈಚೆಗೆ ನಡೆದ ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಆದರೆ ಪಾಕಿಸ್ತಾನ ಎದುರಿನ ಟೆಸ್ಟ್ ಸರಣಿಯ ವೇಳೆ ನ್ಯೂಜಿಲೆಂಡ್‌ಗೆ ತೆರಳಿದ್ದರು.

ರಾಜಸ್ತಾನ್ ರಾಯಲ್ಸ್ ಫ್ರಾಂಚೈಸ್ ₹ 12.5 ಕೋಟಿ ತೆತ್ತು ಅವರನ್ನು ಕೊಂಡುಕೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು