ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ ಇಂಗ್ಲೆಂಡ್‌ ಬೌಲರ್‌ ಸ್ಟುವರ್ಟ್‌ ಬ್ರಾಡ್‌  

Published 30 ಜುಲೈ 2023, 13:14 IST
Last Updated 30 ಜುಲೈ 2023, 13:14 IST
ಅಕ್ಷರ ಗಾತ್ರ

ಲಂಡನ್‌: ಇಂಗ್ಲೆಂಡ್‌ ವೇಗದ ಬೌಲರ್‌ ಸ್ಟುವರ್ಟ್‌ ಬ್ರಾಡ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯದ ಮೂರನೇ ದಿನದಾಟದ ಬಳಿಕ ತಮ್ಮ ನಿರ್ಧಾರ ಪ್ರಕಟಿಸಿದ್ದರು. ಆ್ಯಷಸ್‌ ಟೆಸ್ಟ್ ಸರಣಿಯ ಬಳಿಕ ನಿವೃತ್ತಿಯಾಗುವುದಾಗಿ ಬ್ರಾಡ್‌ ಶನಿವಾರ ಹೇಳಿದ್ದರು.

2006 ರಲ್ಲಿ ಟಿ20 ಮತ್ತು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಅವರು, 2007 ರಲ್ಲಿ ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಟೆಸ್ಟ್‌ ಕ್ರಿಕೆಟ್‌ಗೆ ಕಾಲಿಟ್ಟಿದ್ದರು.

37 ವರ್ಷದ ಬ್ರಾಡ್‌, ಆ್ಯಷಸ್‌ನ ಅಂತಿಮ ಪಂದ್ಯ ಸೇರಿದಂತೆ ಒಟ್ಟು 167 ಟೆಸ್ಟ್‌ಗಳಿಂದ 602 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೆಸ್ಟ್‌ನಲ್ಲಿ ಅತ್ಯಧಿಕ ವಿಕೆಟ್‌ ಪಡೆದ ಐದನೇ ಬೌಲರ್‌ ಅವರಾಗಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT