ಸಿಡ್ನಿ: ಭಾರತ ವಿರುದ್ಧ ಸರಣಿ ಗೆದ್ದ ಬಳಿಕ ಆಸ್ಟ್ರೇಲಿಯಾ ತಂಡಕ್ಕೆ ಟ್ರೋಫಿ ನೀಡಲು ತಮ್ಮನ್ನು ಆಹ್ವಾನಿಸದಿದ್ದಕ್ಕಾಗಿ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಭಾನುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾದ ಅಲನ್ ಬಾರ್ಡರ್ ಹಾಗೂ ಭಾರತದ ಸುನಿಲ್ ಗವಾಸ್ಕರ್ ಹೆಸರಿನಲ್ಲಿ ಈ ಸರಣಿ ನಡೆದಿತ್ತು.
.Aus Vs Ind: 10 ವರ್ಷಗಳ ಬಳಿಕ ಬಾರ್ಡರ್–ಗವಾಸ್ಕರ್ ಟ್ರೋಫಿ ಕಳೆದುಕೊಂಡ ಭಾರತ.
ಸರಣಿ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಬಾರ್ಡರ್ ಅವರು ಟ್ರೋಫಿಯನ್ನು ನೀಡಿದರು. ಆದರೆ ಅದೇ ಸಮಯದಲ್ಲಿ ಗವಾಸ್ಕರ್, ಸ್ಥಳದಲ್ಲಿದ್ದರೂ ಅವರನ್ನು ನಿರ್ಲಕ್ಷಿಸಲಾಗಿತ್ತು.

‘ನಿಸ್ಸಂಶಯವಾಗಿ ನಾನು ಟ್ರೋಫಿ ನೀಡಲು ಇಷ್ಟಪಡುತ್ತಿದ್ದೆ. ಇದು ಬಾರ್ಡರ್-ಗವಾಸ್ಕರ್ ಟ್ರೋಫಿ. ಆಸ್ಟ್ರೇಲಿಯಾ ಮತ್ತು ಭಾರತಕ್ಕೆ ಸಂಬಂಧಿಸಿದ್ದು’ ಎಂದು ಗವಾಸ್ಕರ್ ಹೇಳಿದ್ದಾರೆ.
.WTC 2025: ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶಿಸಲು ಭಾರತ ವಿಫಲ.
‘ನಾನು ಮೈದಾನದಲ್ಲಿದ್ದೆ. ಇಲ್ಲಿ ಆಸ್ಟ್ರೇಲಿಯಾ ಗೆದ್ದಿರುವುದು ನನಗೆ ಮುಖ್ಯವಲ್ಲ. ಅವರು ಉತ್ತಮ ಕ್ರಿಕೆಟ್ ಆಡಿದರು, ಆದ್ದರಿಂದ ಅವರು ಗೆದ್ದರು. ನನ್ನ ಉತ್ತಮ ಸ್ನೇಹಿತ ಅಲನ್ ಬಾರ್ಡರ್ ಅವರೊಂದಿಗೆ ಟ್ರೋಫಿಯನ್ನು ನೀಡಲು ನಾನು ಸಂತೋಷಪಡುತ್ತೇನೆ’ ಎಂದು ಅವರು ಹೇಳಿದರು.

ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು 1996-1997 ರಿಂದ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಸ್ಪರ್ಧಿಸುತ್ತಿವೆ.
.IND vs AUS Test | ಬೌಲರ್ಗಳ ಮೆರೆದಾಟ; ಭಾರತ ಬ್ಯಾಟರ್ಗಳ ಪರದಾಟ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.