ಭಾರತಕ್ಕೆ ಕಠಿಣ ಪರಿಸ್ಥಿತಿಯಿಂದ ಹೊರಬರುವ ಸಾಮರ್ಥ್ಯವಿದೆ: ಸುನಿಲ್ ಗವಾಸ್ಕರ್

ನವದೆಹಲಿ: ಬಲಿಷ್ಠ ಬ್ಯಾಟಿಂಗ್ ಕ್ರಮಾಂಕವನ್ನು ಹೊಂದಿರುವ ಭಾರತ ತಂಡವು ಕಠಿಣ ಪರಿಸ್ಥಿತಿಯಿಂದಲೂ ಹೊರಬರುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ನಾಯಕ ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಸೌತಾಂಪ್ಟನ್‌ನಲ್ಲಿ ಶುಕ್ರವಾರ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಲಿದೆ ಎಂದು ಗವಾಸ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಮತ್ತು ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಬಲ ತಂಡಕ್ಕಿದೆ. ಜತೆಗೆ, ಮಧ್ಯಮ ಮತ್ತು ಕೆಳ ಕ್ರಮಾಂಕದಲ್ಲಿ ರವೀಂದ್ರ ಜಡೇಜ, ಆರ್.ಅಶ್ವಿನ್ ಮೇಲೆ ಹೆಚ್ಚು ನಿರೀಕ್ಷೆ ಇದೆ ಎಂದು ಗವಾಸ್ಕರ್ ತಿಳಿಸಿದ್ದಾರೆ.
ಅನುಭವಿಗಳಾದ ಅಶ್ವಿನ್, ಜಡೇಜಾ ಚೆನ್ನಾಗಿ ಆಡುತ್ತಿರುವುದರಿಂದ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾಗಲಿದ್ದಾರೆ. ಆದರೆ, ಎದುರಾಳಿ ನ್ಯೂಜಿಲೆಂಡ್ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ್ದಾರೆ.
ಇಂಗ್ಲೆಂಡ್‌ನ ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಂಡು ಆಡುವ ಸಾಮರ್ಥ್ಯ ಭಾರತಕ್ಕಿದೆ. ನಮ್ಮ ಬ್ಯಾಟ್ಸ್‌ಮನ್‌ಗಳು ಎದುರಾಳಿಗಳಿಗೆ ಕಠಿಣ ಸವಾಲು ಒಡ್ಡಲಿದ್ದಾರೆ ಎಂದು ಗವಾಸ್ಕರ್ ಹೇಳಿದರು.
ಬೌಲಿಂಗ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ನೇತೃತ್ವದ ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದಿದ್ದಾರೆ.
ಇದನ್ನೂ ಓದಿ... PV Web Exclusive: ಮಣ್ಣಲ್ಲಿ ಬಿದ್ದಿದ್ದ ನ್ಯೂಜಿಲೆಂಡ್ ಮುಗಿಲಲ್ಲಿ ಎದ್ದದ್ದು...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.