ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಬಾರಿಯ ಐಪಿಎಲ್‌ನಿಂದ ಹೊರನಡೆದ ಸುರೇಶ್‌ ರೈನಾ

Last Updated 29 ಆಗಸ್ಟ್ 2020, 11:14 IST
ಅಕ್ಷರ ಗಾತ್ರ

ದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್‌ ಸುರೇಶ್ ರೈನಾ ಅವರು ‌ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಹೊರನಡೆದಿದ್ದಾರೆ ಎಂದು ತಂಡ ಶನಿವಾರ ತಿಳಿಸಿದೆ.

33 ವರ್ಷದ ಆಟಗಾರ ರೈನ ಈ ತಿಂಗಳ ಆರಂಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದರು.

‘ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಳಿಂದಾಗಿ ಭಾರತಕ್ಕೆ ಮರಳಿದ್ದಾರೆ. ಉಳಿದ ಐಪಿಎಲ್ ಋತುವಿನಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ಮತ್ತು ಅವರ ಕುಟುಂಬದ ಸಂಪೂರ್ಣ ಬೆಂಬಲಕ್ಕೆ ನಿಲ್ಲುತ್ತದೆ,’ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT