ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೇತರಿಸಿಕೊಳ್ಳುತ್ತಿರುವ ಸೂರ್ಯಕುಮಾರ್ ಯಾದವ್: IPLನ ಇನ್ನಷ್ಟು ಪಂದ್ಯಗಳಿಗೆ ಅಲಭ್ಯ

Published 28 ಮಾರ್ಚ್ 2024, 10:55 IST
Last Updated 28 ಮಾರ್ಚ್ 2024, 10:55 IST
ಅಕ್ಷರ ಗಾತ್ರ

ನವದೆಹಲಿ: ಅಂಡವಾಯು (hernia) ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ವಿಶ್ವದ ನಂಬರ್‌ 1 ಟಿ–20 ಬ್ಯಾಟರ್ ಸೂರ್ಯಕುಮಾರ್ ಯಾದವ್‌, ಐಪಿಎಲ್‌ನ ಇನ್ನೂ ಕೆಲವು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಅವರ ಪ್ರಗತಿಯನ್ನು ಗಮನಿಸುತ್ತಿದೆ.

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್‌ ಯಾದವ್ ಪ್ರತಿನಿಧಿಸುತ್ತಿದ್ದಾರೆ. ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಮುಂಬೈ ಸೋತಿದೆ.

‘ಸೂರ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರವೇ ಅವರು ಮುಂಬೈ ಇಂಡಿಯನ್ಸ್ ಪರ ಆಡಲಿದ್ದಾರೆ. ಈಗಾಗಲೇ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಅವರು, ಇನ್ನೂ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಜೂನ್‌ನಲ್ಲಿ ನಡೆಯಲಿರುವ ಟಿ–20 ವಿಶ್ವಕ‍ಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್‌ ದೊಡ್ಡ ಜವಾಬ್ದಾರಿ ನಿಭಾಯಿಸಬೇಕಾಗಿರುವುದರಿಂದ, ಯಾವುದೇ ಅವಕಾಶ ಕೈಚೆಲ್ಲಲು ಬಿಸಿಸಿಐ ಮುಂದಾಗುತ್ತಿಲ್ಲ.

‘ಬಿಸಿಸಿಐಗೆ ಗುರಿ ಇರುವುದು ಟಿ–20 ವಿಶ್ವಕಪ್ ಮೇಲೆ. ಸೂರ್ಯಕುಮಾರ್‌ ಖಂಡಿತವಾಗಿಯೂ ಮುಂಬೈ ಪರ ಆಡಲಿದ್ದಾರೆ. ಆದರೆ ಯಾವುದೇ ಧಾವಂತ ಇಲ್ಲ’ ಎಂದು ಮೂಲಗಳು ತಿಳಿಸಿವೆ.

ಈವರೆಗೂ 60 ಟಿ–20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸೂರ್ಯಕುಮಾರ್‌, ನಾಲ್ಕು ಶತಕ ಸೇರಿ 2,141 ರನ್‌ ಗಳಿಸಿದ್ದಾರೆ. ಈ ಮಾದರಿಯಲ್ಲಿ ಅವರ ಸ್ಟ್ರೈಕ್‌ ರೇಟ್‌ 171.55 ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT