ಅಹಮದಾಬಾದ್ (ಗುಜರಾತ್): ಮೊದಲ ಬಾಲ್ಗೇ ಸಿಕ್ಸರ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಬದುಕು ಆರಂಭಿಸಿದ್ದಾರೆ.

ಅಹಮದಾಬಾದ್ನಲ್ಲಿ ಗುರುವಾರ ಆರಂಭವಾದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಎಸೆತದಲ್ಲಿ ಸಿಕ್ಸರ್ ಸಿಡಿಸಿದರು.

ಸೂರ್ಯಕುಮಾರ್ ಅವರು ಜೋಫ್ರಾ ಆರ್ಚರ್ ಅವರ 143.9 ಕಿ.ಮೀ ವೇಗದ ಎಸೆತವನ್ನು ಬೌಂಡರಿಗೆ ಕಳುಹಿಸಿದರು. ಇದಿಷ್ಟೇ ಅಲ್ಲ ಇದೇ ಪಂದ್ಯದಲ್ಲಿ ಅವರು ಅರ್ಧಶತಕ ಸಿಡಿಸಿದರು.

ತಮ್ಮ ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಈ ಸಾಧನೆ ಮಾಡಿದ್ದಾರೆ. ತಾವು ಆಡಿದ ಮೊದಲ ಟಿ20 ಯಲ್ಲಿ ಬ್ಯಾಟಿಂಗ್ ಮಾಡುವ ಅವಕಾಶದಿಂದ ಅವರು ವಂಚಿತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.