ನವದೆಹಲಿ: ಭಾರತದ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಹಾಗೂ ಪತ್ನಿ ದೇವಿಶಾ ಅವರು ತಮ್ಮ ಚೊಚ್ಚಲ ಮಗುವನ್ನು ಬರಮಾಡಿಕೊಂಡಿದ್ದಾರೆ.

ಗುರುವಾರ (ಮೇ.7) ಸೂರ್ಯ ಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸೂರ್ಯ ಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಂತಸದಿಂದ ಹೆಣ್ಣುಮಗುವನ್ನು ಬರಮಾಡಿಕೊಂಡಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಈ ಜೋಡಿ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ವಿವಾಹವಾಗಿ 10 ವರ್ಷಗಳ ಬಳಿಕ ಈ ದಂಪತಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದ ಸದಸ್ಯರಿಂದ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ತಿಳಿಸಿದ್ದಾರೆ.

ಸೂರ್ಯ ಕುಮಾರ್ ಯಾದವ್ ಹಾಗೂ ಪತ್ನಿ ದೇವಿಶಾ ಅವರು ಕಾಲೇಜು ದಿನಗಳಲ್ಲೇ ಪ್ರೀತಿಸಿ ಮದುವೆಯಾದವರು. ವಿಶೇಷ ಎಂದರೆ ದೇವಿಶಾ ಶೆಟ್ಟಿ ಅವರು ಉಡುಪಿ ಮೂಲದವರು. ಇವರು ಪರಿಣಿತ ಭರತನಾಟ್ಯ ನೃತ್ಯಗಾರ್ತಿ ಮತ್ತು ನೃತ್ಯ ತರಬೇತುದಾರರಾಗಿದ್ದಾರೆ. ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.